ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತೀ ವರ್ಷ ರೂ.6,000 ಗಳನ್ನು ಪ್ರತೀ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹತ್ತಿರದ ಗ್ರಾಮಕರಣಿಕರ ಕಛೇರಿ, ನಾಡಕಛೇರಿ, ತಾಲೂಕು ಕಛೇರಿ, ಗ್ರಾಮ ಪಂಚಾಯತಿ ಕಛೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ ಅಥವಾ ಅಟಲ್‍ಜೀ ಜನಸ್ನೇಹಿ ಕೇಂದ್ರ ಹಾಗೂ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ಜೂನ್ 25 ರೊಳಗೆ ನೊಂದಾಯಿಸಿಕೊಳ್ಳಲು ತಿಳಿಸಿದೆ.
ಆದರೆ ನಿವೃತ್ತ/ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ನೌಕರರು (ಗ್ರೂಪ್ ಡಿ. ಹೊರತುಪಡಿಸಿ), ರೂ. 10,000 ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರು, ನಿವೇಶನ, 94ಸಿ, ಮತ್ತು ಭೂ ಪರಿವರ್ತಿತ ಜಮೀನುಗಳನ್ನು ಹೊಂದಿದವರಿಗೆ ಇದು ಅನ್ವಯಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಲೆಕ್ಕಾಧಿಕಾರಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Be the first to comment on "ಕಿಸಾನ್ ಸಮ್ಮಾನ್ ನಿಧಿ: ಜೂನ್. 25ರೊಳಗೆ ನೋಂದಾಯಿಸಿ"