ಗ್ರಾಮದ ಕಡೆ ಶಾಸಕರ ನಡೆ ಎಂಬ ಘೋಷವಾಕ್ಯದೊಂದಿಗೆ ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗ್ರಾಮ ಸ್ಪಂದನ ಕಾರ್ಯಕ್ರಮವನ್ನು ಜೂನ್ 28ರಂದು ನಡೆಸಲಿದ್ದಾರೆ.
ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮಂಚಿ ಮತ್ತು ಮಧ್ಯಾಹ್ನದ ಬಳಿಕ ಅಮ್ಟಾಡಿ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ಮತ್ತು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರು ಮತ್ತು ವಿವಿಧ ಸ್ತರದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…