ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಕೆಂಪೇಗೌಡರ ಜನಪರ ಕಾಳಜಿ ಎಲ್ಲರಿಗೂ ಆದರ್ಶವಾಗಿದ್ದು, ಸರ್ವಕಾಲಕ್ಕೂ ಉಳಿಯುವಂಥದ್ದು ಎಂದರು.
ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಆಹಾರ ಶಾಖೆಯ ಉಪತಹಶೀಲ್ದಾರ್ ವಾಸು ಶೆಟ್ಟಿ, ಆಹಾರ ಶಾಖೆಯ ಶ್ರೀನಿವಾಸ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್, ಒಕ್ಕಲಿಗರ ಸಂಘದ ಖಜಾಂಚಿ ವಿಶ್ವನಾಥ, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು. ತಾಲೂಕು ಕಚೇರಿ ಸಿಬಂದಿ ಜನಾರ್ಧನ್ ಬಂಟ್ವಾಳ ಸ್ವಾಗತಿಸಿ ವಂದಿಸಿದರು.