ಬಂಟ್ವಾಳ

ಅಶ್ಲೀಲ ವಿಡಿಯೋವನ್ನಿಟ್ಟು ಹಣವಸೂಲಿ: ಬಂಟ್ವಾಳ ನಿವಾಸಿ ದೂರು

ಬಂಟ್ವಾಳ ನಿವಾಸಿ ಮತ್ತು ಹುಡುಗಿಯೊಬ್ಬಳ ನಡುವಿನ ಅಶ್ಲೀಲ ವಿಡಿಯೋ ವನ್ನಿಟ್ಟು ಹಣಕ್ಕಾಗಿ ಪೀಡಿಸಿ ವಸೂಲು ಮಾಡಿದ ಪ್ರಕರಣ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದೆ.

ಜಾಹೀರಾತು

ವಾಯ್ಸ್ ಮೆಸೇಜ್ ಮೂಲಕ ಸುಮಾರು 8 ತಿಂಗಳ ಹಿಂದೆ ಬಂಟ್ವಾಳ ನಿವಾಸಿಯೊಬ್ಬರಿಗೆ ಹುಡುಗಿಯೊಬ್ಬಳ ಪರಿಚಯವಾಗಿದ್ದು, ಕೆಲವು ದಿನಗಳ ನಂತರ ಆ ಹುಡುಗಿಯನ್ನು ಮಂಗಳೂರಿನ ಲಾಡ್ಜ್ ಒಂದರಲ್ಲಿ ಭೇಟಿಯಾಗಿ ದೈಹಿಕ ಸಂಪರ್ಕ ನಡೆಸಿದ ಸಂದರ್ಭ, ಹುಡುಗಿಯು ಆ ವಿಡಿಯೋವನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಘಟನೆ ನಡೆದ ಕೆಲವು ದಿನಗಳ ನಂತರ ಬಂಟ್ವಾಳ ನಿವಾಸಿಗೆ ಅಪರಿಚಿತ ವ್ಯಕ್ತಿಯೋರ್ವ ಈ ಅಶ್ಲೀಲ ವಿಡಿಯೋವನ್ನು ಕಳುಹಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಗಿ ದೂರಲಾಗಿದೆ. ಈ ಬಗ್ಗೆ ಹುಡುಗಿಯಲ್ಲಿ ವಿಚಾರಿಸಿದಾಗ ಆಕೆ ತನ್ನ ಮೊಬೈಲ್ ರಿಪೇರಿಗೆ ಕೊಟ್ಟ ಸಮಯ ವಿಡಿಯೋ ಬೇರೆಯವರಿಗೆ ದೊರಕಿದೆ ಎಂದು ತಿಳಿಸಿದ್ದು, ಆ ವಿಡಿಯೋವನ್ನು ಪಡೆದ ವ್ಯಕ್ತಿ ಬಂಟ್ವಾಳ ನಿವಾಸಿಗೆ ಹಣಕ್ಕಾಗಿ ಪೀಡಿಸಿದ್ದಾನೆ. ಹಣ ಕೊಡಲು ಒಪ್ಪದಿದ್ದಾಗ ಬಂಟ್ವಾಳದಲ್ಲಿ ಅವರನ್ನು ಅಪಹರಿಸಿ 60 ಸಾವಿರ ರೂಪಾಯಿಗಳನ್ನು ಮತ್ತು ಪರ್ಸನ್ನು ಬಲವಂತವಾಗಿ ಕಿತ್ತುಕೊಂಡಿದ್ದು, ಎಟಿಎಂ ಕಾರ್ಡ್ ನ್ನು ಬಳಸಿ 9 ಸಾವಿರ ರೂ ಗಳನ್ನು ಪಡೆದಿದ್ದಾಗಿ ದೂರಲಾಗಿದೆ. ಅದೇ ದಿನ ಮತ್ತೆ 48 ಸಾವಿರ ರೂ ಗಳನ್ನು ಆರೋಪಿಗಳು ಪಡೆದಿದ್ದು, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರ ಮಾಡಿ ಹಣಕ್ಕಾಗಿ ನಿರಂತರ ಬೆದರಿಕೆ  ಒಡ್ಡಿದ್ದಾಗಿ ಬಂಟ್ವಾಳ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ 363, 323, 504, 392, 383, 506 ಜೊತೆಗೆ 34 ಐ.ಪಿ.ಸಿ ಮತ್ತು 66E & 67A ಐ.ಟಿ ಆಕ್ಟ್ ನಂತೆ ಪ್ರಕರಣ ದಾಖಲಾಗಿರುತ್ತದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts