ವಿಶ್ವ ಹಿಂದು ಪರಿಷದ್, ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಜುಲೈ 3ರಂದು ಬೆಳಗ್ಗೆ 10ರಿಂದ 12ರವರೆಗೆ ಗೋಹತ್ಯೆ, ಸಾಗಾಟ ಮತ್ತಿತರ ವಿಷಯಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕೆ ಬಿಜೆಪಿಯೂ ಬೆಂಬಲ ವ್ಯಕ್ತಪಡಿಸಿದೆ.
ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಹಿಂದು ಜಾಗರಣಾ ವೇದಿಕೆ ಅಧ್ಯಕ್ಷ ಕಲ್ಲಡ್ಕ ರತ್ನಾಕರ ಶೆಟ್ಟಿ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದು, ವಿಟ್ಲ ಹಾಗೂ ಬಂಟ್ವಾಳ ಪ್ರಖಂಡ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಪ್ರತಿಭಟನೆ ನಡೆಯಲಿದೆ ಎಂದದಿದ್ದಾರೆ. ರೈತನ ದ್ವನಿಯಾಗಿ ನಮ್ಮ ಸಂಘಟನೆ ಬೀದಿಗಿಳಿದು ಹೋರಾಟದ ಮೂಲಕ ಆಡಳಿತ ಯಂತ್ರವನ್ನು ಚುರುಕುಗೊಳಿಸುವಂತೆ ಮಾಡಲು ಹಾಗೂ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅವರೂ ಬೆಂಬಲ ಸೂಚಿಸಿದ್ದಾರೆ.