ಬಂಟ್ವಾಳ: ತಾಲೂಕಿನಲ್ಲಿ ಗೋವಿನ ಹೆಸರಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಆಪಾದಿಸಿರುವ ಕಾಂಗ್ರೆಸ್, ತಾಲೂಕು ಹಾಗೂ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಬೇಕು ಎಂದು ಎಎಸ್ಪಿ ಸೈದುಲು ಅದಾವತ್ ಅವರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮನವಿ ನೀಡುವುದರ ಮೂಲಕ ಒತ್ತಾಯಿಸಿದೆ.
ತಾಲೂಕಿನಲ್ಲಿ ಯಾರೇ ಗೋ ಕಳ್ಳತನ ಮಾಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಾಲೂಕಿನಲ್ಲಿ ಶಾಂತಿ, ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಒತ್ತಾಯ"