ಬಂಟ್ವಾಳ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಅಭ್ಯರ್ಥಿಗಳಿಗೆ ಮಾಧ್ಯಮದ ಕೊಡುಗೆ ಅಪಾರ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಹೇಳಿದರು.

ಜಾಹೀರಾತು

ಅವರು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಗುರುವಾರ ತುಂಬೆ ಪ.ಪೂ.ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಪ್ರಸ್ತುತ ದಿನಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸುವುದು ಅಗತ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಪೋಕಸ್ ಕಳೆದುಕೊಳ್ಳಬಾರದು. ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಮುಂದುವರಿದರೆ ಯಶಸ್ಸು ಖಂಡಿತ. ಬಂಟ್ವಾಳ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪತ್ರಕರ್ತರು ಹೀಗೆ ಎಲ್ಲರೂ ಜೊತೆಯಾಗಿ ಕಾರ್ಯನಿರ್ವಹಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗಿ ಉಳಿಯಲು ಮಾಧ್ಯಮ ಕ್ಷೇತ್ರದ ಕೊಡುಗೆ ವಿಶೇಷವಾಗಿದ್ದು, ಹಲವು ಸವಾಲುಗಳ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಪತ್ರಕರ್ತರ ಮುಂದಿದೆ. ಸಮಾಜವನ್ನು ಬಡಿದೆಬ್ಬಿಸುವ ಕಾರ್ಯ ಮಾಡಿದಾಗ ಅದರಿಂದ ಗೌರವವೂ ಹೆಚ್ಚಾಗುತ್ತದೆ ಎಂದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಅವರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪ.ಗೋ.ಪ್ರಶಸ್ತಿ ವಿಜೇತ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ಉಪಸ್ಥಿತರಿದ್ದರು. ರತ್ನದೇವ್ ಪುಂಜಾಲಕಟ್ಟೆ ಸನ್ಮಾನ ಪತ್ರ ವಾಚಿಸಿದರು.

ತಾಲೂಕು ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಪತ್ರಕರ್ತ ಉದಯಶಂಕರ್ ನೀರ್ಪಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ವೆಂಕಟೇಶ್ ಬಂಟ್ವಾಳ, ವಿಷ್ಣುಗುಪ್ತ ಪುಣಚ, ಸಂದೀಪ್ ಸಾಲ್ಯಾನ್, ಯಾದವ ಅಗ್ರಬೈಲ್, ಅಬ್ದುಲ್ ರಹಿಮಾನ್ ತಲಪಾಡಿ, ಕಿರಣ್ ಸರಪಾಡಿ, ವಾಮನ ಪೂಜಾರಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts