ಬಂಟ್ವಾಳ: ಲೋಕೋಪಯೋಗಿ ಉಪವಿಭಾಗ ಬಂಟ್ವಾಳದ ಹೊಸ ಕಟ್ಟಡ ನಿರ್ಮಾಣಗೊಂಡಿದ್ದು, ಶನಿವಾರ ಇದರ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಹಿಂದೆ ಇದ್ದ ಕಚೇರಿ ಪಕ್ಕದಲ್ಲೇ ಸುಸಜ್ಜಿತ ಕಚೇರಿ ನಿರ್ಮಾಣಗೊಂಡಿದೆ.
ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಬಿ.ಟಿ.ಕಾಂತರಾಜ್, ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ ಕುಮಾರ್, ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಚಂದ್ರಪ್ರಕಾಶ ಶೆಟ್ಟಿ, ಮಂಜುಳಾ ಮಾವೆ, ಎಂ.ಎಸ್. ಮಹಮ್ಮದ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೈ. ಉಮೇಶ್ ಭಟ್, ಇಂಜಿನಿಯರುಗಳಾದ ಅಮೃತ್ ಕುಮಾರ್, ರವೀಂದ್ರನಾಥ ಶೆಟ್ಟಿ, ಪ್ರೀತಮ್, ಅರುಣ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.