ಪ್ರತಿಯೊಬ್ಬ ವಿದ್ಯಾರ್ಥಿಯೂ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ, ಧೈರ್ಯ ಮತ್ತು ಛಲವನ್ನು ತಮ್ಮೊಳಗೆ ಮೈಗೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಕಾವೂರು ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಪ್ರೊ. ಮನೋಜ್ ಲೂಯಿಸ್ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ೨೦೧೯-೨೦ ಸಾಲಿನ ವಿದ್ಯಾರ್ಥಿ ಸಂಘವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಎನ್ನುವುದು ನಮ್ಮ ಗೊಂದಲಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸ್ವತಂತ್ರವಾಗಿ ಯೋಚಿಸುವ ಶಕ್ತಿಯನ್ನು ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ವರ್ತನೆಯಲ್ಲಿ ಅಡಕವಾಗಿರಬೇಕು. ದೂರದೃಷ್ಟಿತ್ವ ಮತ್ತು ಸ್ಪಷ್ಟತೆ ವಿದ್ಯಾರ್ಥಿಗಳಲ್ಲಿ ಇರಬೇಕು ಎಂದರು.
ಎಸ್.ವಿ.ಎಸ್ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ| ಪಾಂಡುರಂಗ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಬಗ್ಗೆ ಗಮನ ಕೊಡಬೇಕು ಎಂದರು.
ಬಂಟ್ವಾಳ ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ ಕೆ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಂಜನ ಪೈ ಎ. ಮತ್ತು ಶ್ವೇತಾ ಪೈ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಲಿನ್ ಕಾರ್ಮೆಲ್ ಡಿಕೋಸ್ಟಾ ಸ್ವಾಗತಿಸಿದರು. ಉಪಾಧ್ಯಕ್ಷೆ ಪಿ. ಶ್ರೀಲಕ್ಷ್ಮೀ ಕಿಣಿ ಅತಿಥಿ ಪರಿಚಯ ಮಾಡಿದರು. ಕಾರ್ಯದರ್ಶಿ ಪಂಚಮಿ ವಿ.ಪ್ರಭು ವರದಿ ಮಂಡಿಸಿದರು. ಜತೆಕಾರ್ಯದರ್ಶಿ ಪೂಜಾರಿ ನೇಹಾ ಕೃಷ್ಣ ಧನ್ಯವಾದ ನೀಡಿದರು. ವಿದ್ಯಾರ್ಥಿನಿ ಖುಷಿ ಎ.ಚೌಟ ಮತ್ತು ಸಹನಾ ಜೆ.ಪಿ. ಕಾರ್ಯಕ್ರಮ ನಿರೂಪಿಸಿದರು.