ಪ್ರಧಾನಮಂತ್ರಿ ನರೇಂದ್ರಮೋದಿ ಅವರೊಂದು ಬಿರುಗಾಳಿ ಇದ್ದಂತೆ. ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಸಂಜೆ ಆಗಮಿಸಿದ ಅವರು ಅಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭ ಪ್ರಧಾನಿಯಾಗಿರುವ ನರೇಂದ್ರ ಮೋದಿ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡ ಅವರು, ಅಂಥ ಸಹೋದರನನ್ನು ಪಡೆದ ನಾನು ಧನ್ಯನಾಗಿದ್ದು, ದೇಶವನ್ನು ಎತ್ತರಕ್ಕೇರಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದರು. ಶಾಲೆಯ ಶಿಕ್ಷಕ ವೃಂದದ ಕಾರ್ಯವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಪ್ರಧಾನಿಯೊಂದಿಗೆ ಭೇಟಿಯಾಗುವ ಅವಕಾಶವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭ ಅಮಿತ್ ಶಾ ಅವರ ಭಾವ ಗುಜರಾತ್ ಬಿಜೆಪಿ ಯುವ ಅಧ್ಯಕ್ಷ ಲಲಿತ್ ಶಾ, ರಾಜ್ಯ ಹಿಂದುಳಿದ ಮೋರ್ಚಾ ಬಿಜೆಪಿ ಅಧ್ಯಕ್ಷ ರಾಜಶೇಖರ ಗಾಣಿಗ, ಉಡುಪಿಯ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್, ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದರು. ಪದವಿ ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ ಕಾಯರಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Be the first to comment on "ಮೋದಿ ಅಂದ್ರೆ ತೂಫಾನ್ – ಕಲ್ಲಡ್ಕದಲ್ಲಿ ಸಹೋದರ ಸೋಮಾಭಾಯಿ ಮೋದಿ"