ಅಮ್ಮುಂಜೆ ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ ಕಾರ್ಯಕ್ರಮ ಅಮ್ಮುಂಜೆ ಜಂಕ್ಷನ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಕಾರ್ಯಕರ್ತರು ಹೆಚ್ಚಿನ ಗಮನವನ್ನು ಕೊಟ್ಟು ಮುಂಬರುವ ಪಂಚಾಯತ್ ಚುನಾವಣೆಗೆ ಕಾರ್ಯ ಪ್ರವೃತಾರಗುವಂತೆ ಕರೆ ನೀಡಿದರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ ಸದಸ್ಯರಾದ ಶಿವಪ್ರಸಾದ್ ,ಪಂಚಾಯತ್ ಅಧ್ಯಕ್ಷರಾದ ಪ್ರೇಮಲತಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾದ ಇಬ್ರಾಹಿಂ ನವಾಜ್, ಚಂದ್ರಶೇಖರ್ ಬಾಳ್ತಿಲ, ಪಂಚಾಯತ್ ಸದಸ್ಯರಾದ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು. ವಲಯ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ ಸ್ವಾಗತಿಸಿದರು. ರಮ್ಲಾನ್ ಕಲಾಯಿ ಧನ್ಯವಾದಗೈದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…