ಬಂಟ್ವಾಳ

ಬಿಜೆಪಿಯ ವಿಸ್ತಾರಕರ ಕಾರ್ಯಾಗಾರ

ಬಿಜೆಪಿ ಬಂಟ್ವಾಳ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಅಂಗವಾಗಿ ವಿಸ್ತಾರಕರ ಕಾರ್ಯಾಗಾರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕ ಗೋಪಾಲಕೃಷ್ಣ ಹೇರಳೆ ವಿಸ್ತಾರಕರ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು. ಪಕ್ಷದ ಸಂಘಟನೆಗೆ ಪೂರಕವಾಗಿ ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟವಾಗಿದ್ದು ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕನಿಷ್ಟ 200 ಸದಸ್ಯರನ್ನು  ಹೊಸದಾಗಿ ಸದಸ್ಯರನ್ನಾಗಿ ನೊಂದಾವಣೆ ಮಾಡಿಸುವಲ್ಲಿ ವಿಸ್ತಾರಕರ ಜವಾಬ್ದಾರಿ ಮಹತ್ವದು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೆಶ್ ಚೌಟ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಕ್ಷೇತ್ರದ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ, ಸಹ ಸಂಚಾಲಕರಾದ ಅಭಿಷೇಕ್ ರೈ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts