ಸರ್ಕಾರಿ ಕಚೇರಿ

ಆತ್ಮ ಯೋಜನೆಯಡಿ ಕೃಷಿಕ ಪ್ರಶಸ್ತಿಗೆ ಆಹ್ವಾನ

2019-20ನೇ ಸಾಲಿನಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.


ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ.
ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೇಕ್ ತಂತ್ರಜ್ಞಾನ ಅಳವಡಿಕೆ(ಹಸಿರು ಮನೆ, ಅಭಿವೃದ್ಧಿ, ಸಸ್ಯಕಾಶಿ,ಕೃಷಿ ಯಾಂತ್ರೀಕರಣ ಇತ್ಯಾದಿ),  ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆ. ಇವುಗಳಲ್ಲಿ ಯಾವುದಾದರೂ ಒಂದು ಚಟುವಟಿಕೆಗೆ ಮಾತ್ರ ಒಂದು ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.

ಜಾಹೀರಾತು

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿಗಳನ್ನು, ಫೊಟೋಗ್ರಾಫ್‍ಗಳನ್ನು, ಸಿ.ಡಿ.ಗಳನ್ನು, ಖರ್ಚು ವೆಚ್ಚಗಳು, ವರಮಾನ, ಪತ್ರಿಕಾ ಪ್ರಕಟಣೆಗಳ ಮಾಹಿತಿ ಇತ್ಯಾದಿಗಳ ಪ್ರತಿ ಲಗತ್ತಿಸಬೇಕು. ಅಳವಡಿಸಿರುವ ತಾಂತ್ರಿಕತೆ ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆಗೆ ಮತ್ತು ಅಳವಡಿಕೆಗೆ ಸಹಕಾರಿಯಂತಿರಬೇಕು. ಕಳೆದೆರಡು ಸಾಲಿನಲ್ಲಿ ತಾಲೂಕು ಇಲ್ಲವೇ ಜಿಲ್ಲಾಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದವರು ಮುಂದಿನ ಹಂತರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಒಂದು ಬಾರಿ ರಾಜ್ಯಮಟ್ಟದ ಶ್ರೇಷ್ಟ ಕೃಷಿಕ/ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದಲ್ಲಿ ಪುನ: ಯಾವುದೇ ತರನಾದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆಸ್ತಕರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 9 ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.