ಬಂಟ್ವಾಳ: ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿರುವ ಟೋಲ್ ಗೇಟ್ ಮುಂಭಾಗ ಬಿ.ಸಿ.ರೋಡ್ ಕಡೆಗೆ ಸಾಗುವ ರಸ್ತೆಯಲ್ಲಿ ಬ್ರಹ್ಮಸನ್ನಿಧಿಯ ಮೇಲ್ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟವೇರಾ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಒಂದೇ ಕುಟುಂಬದ 11 ಜನರ ಪೈಕಿ ಗೋವಿಂದ, ಪದ್ಮಾವತಿ,ನಾಗರಾಜ ಮತ್ತು ಗಣೇಶ ಎಂಬವರುಗಳು ಮೃತ ಪಟ್ಟಿದ್ದು, ಉಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು 1.15ಕ್ಕೆ ಈ ಅಪಘಾತ ನಡೆದಿದ್ದು, ಕೂಡಲೇ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಸೈದುಲು, ಸಿಐ ನಾಗರಾಜ್, ಟ್ರಾಫಿಕ್ ಎಸ್.ಐ. ಮಂಜುನಾಥ್ ಸಹಿತ ಪೊಲೀಸ್ ಸಿಬ್ಬಂದಿ ಆಗಮಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಹಾಗೂ ಸುಗಮ ವಾಹನ ಸಂಚಾರಕ್ಕೆ ಸಹಕರಿಸಿದರು. ಕೆಲಕಾಲ ಅಪಘಾತದಿಂದ ರಸ್ತೆಯಲ್ಲಿ ವಾಹನದಟ್ಟಣೆ ಉಂಟಾಗಿತ್ತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)