www.bantwalnews.com Editor: Harish Mambady
ಒಂದು ತಿಂಗಳೊಳಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಮೂಲಸೌಕರ್ಯಗಳೊಂದಿಗೆ ಸುಧಾರಣೆಯಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸೂಚನೆ ನೀಡಿದ್ದಾರೆ.
ಬಂಟ್ವಾಳದ ಬಿ.ಸಿ.ರೋಡಿನ ಮೊಡಂಕಾಪು ಮತ್ತು ಬಿ.ಸಿ.ರೋಡ್ ಜೋಡುಮಾರ್ಗದಲ್ಲಿರುವ ವಸತಿ ಶಾಲೆಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ದುರಸ್ತಿಪಡಿಸುವುದರ ಜೊತೆಗೆ ವಿವಿಧ ಸಮಸ್ಯೆಗಳು ತಲೆದೋರದಂತೆ ಎಚ್ಚರವಹಿಸಬೇಕು ಎಂದರು. ಆಶ್ರಮ ಶಾಲಾ ಪಕ್ಕದಲ್ಲಿ ತ್ಯಾಜ್ಯದಿಂದಾಗಿ ವಿದ್ಯಾರ್ಥಿಗಳಿಗೆ ಹಾಗು ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಮನಗಂಡು ಸಂಬಂಧಪಟ್ಟವರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಸಚಿನ್ ಕುಮಾರ್, ತಹಶೀಲ್ದಾರ್ ರಶ್ಮಿ ಎಸ್.ಆರ್ , ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಾದ ಶಿವಣ್ಣ, ಮೋಹನ್, ಲೋಕಾಯುಕ್ತ ಎಸ್ಪಿ ಎಂ.ಕೆ. ಮಾದಯ್ಯ, ಡಿವೈಎಸ್ಪಿ ಜಗದೀಶ್ ಎಂ, ಬಂಟ್ವಾಳ ಎಎಸ್ಪಿ ಸೈದುಲು ಅದಾವತ್, ಲೋಕಾಯುಕ್ತ ಇನ್ಸ್ ಪೆಕ್ಟರ್ ಭಾರತಿ, ಲೋಕಾಯುಕ್ತ ಎಸ್ಸೈ ಚಂದ್ರಶೇಖರ್, ಸಿಬ್ಬಂದಿ ಹರಿಶ್ಚಂದ್ರ, ಬಂಟ್ವಾಳ ಎಸ್ಸೈ ಚಂದ್ರಶೇಖರ್, ಕಂದಾಯ ಇಲಾಖೆಯ ಆರ್.ಐ. ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ಸಿಬ್ಭಂದಿ ಸದಾಶಿವ ಕೈಕಂಬ ಮತ್ತಿತರರು ಉಪಸ್ಥಿತರಿದ್ದರು ಮತ್ತಿತರರು ಉಪಸ್ಥಿತರಿದ್ದರು. ಹಾಸ್ಟೆಲ್ ವಾರ್ಡನ್ ಪ್ರಸಾದ್ ಹಾಸ್ಟೆಲ್ ನ ಸ್ಥಿತಿಗತಿ ವಿತರಿಸಿದರು.
Be the first to comment on "ತಿಂಗಳೊಳಗೆ ಹಾಸ್ಟೆಲ್ ಸುಧಾರಣೆ: ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಸೂಚನೆ"