www.bantwalnews.com Editor: Harish Mambady
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿರುವ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕಾರ್ಯವೈಖರಿಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳಕ್ಕೆ ಶನಿವಾರ ಆಗಮಿಸಿದ ಅವರು, ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ನಾನಾ ವಿಭಾಗಗಳನ್ನು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆ ಯಲ್ಲಿ ನ ವೈದ್ಯರು ರೋಗಿಗಳನ್ನು ಹೆಚ್ಚಿನ ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅನಸ್ತೇಶಿಯಾ ವೈದ್ಯರ ಕೊರತೆ ಇಲ್ಲಿದ್ದು, ಗುತ್ತಿಗೆ ಆಧಾರದಲ್ಲಾದರೂ ಶೀಘ್ರದಲ್ಲಿ ನೇಮಕಾತಿ ಆಗಬೇಕು. ಎಂದರು. ಇದೇ ವೇಳೆ ಸರಕಾರಿ ಆಸ್ಪತ್ರೆಯ ಡಿ.ಗ್ರೂಪ್ ನೌಕರರಿಗೆ ವೇತನ ಸಕಾಲಕ್ಕೆ ಪಾವತಿಯಾಗುತ್ತಿಲ್ಲ, ಇದರಿಂದ ತೊಂದರೆ ಉಂಟಾಗುತ್ತಿದೆ ಎಂದು ಲೋಕಾಯುಕ್ತರಲ್ಲಿ ಅಳಲು ತೋಡಿಕೊಂಡರು. ಈ ಸಂದರ್ಭ ಬಂಟ್ವಾಳ ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು, ಬಂಟ್ವಾಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಾದ ಶಿವಣ್ಣ, ಮೋಹನ್, ಲೋಕಾಯುಕ್ತ ಎಸ್ಪಿ ಎಂ.ಕೆ. ಮಾದಯ್ಯ, ಡಿವೈಎಸ್ಪಿ ಜಗದೀಶ್ ಎಂ, ಬಂಟ್ವಾಳ ಎಎಸ್ಪಿ ಸೈದುಲು ಅದಾವತ್, ಲೋಕಾಯುಕ್ತ ಇನ್ಸ್ ಪೆಕ್ಟರ್ ಭಾರತಿ, ಲೋಕಾಯುಕ್ತ ಸಿಬ್ಬಂದಿ ಹರಿಶ್ಚಂದ್ರ, ಬಂಟ್ವಾಳ ಎಸ್ಸೈ ಚಂದ್ರಶೇಖರ್, ಕಂದಾಯ ಇಲಾಖೆಯ ಆರ್.ಐ. ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ಸಿಬ್ಭಂದಿ ಸದಾಶಿವ ಕೈಕಂಬ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಸರ್ಕಾರಿ ಆಸ್ಪತ್ರೆ ವ್ಯವಸ್ಥೆಗೆ ಲೋಕಾಯುಕ್ತ ಮೆಚ್ಚುಗೆ"