ಬಾಳ್ತಿಲ ಗ್ರಾಮದ ಬೂತ್ 154ರಲ್ಲಿ ಗಿಡ ನೆಡುವ ಮೂಲಕ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಕ್ರಮ ಭಾನುವಾರ ನಡೆಯಿತು.
ಈ ವೇಳೆ 50 ಮಂದಿ ಪಕ್ಷದ ಸದಸ್ಯರಾಗಿ ನೋಂದಾಯಿಸಲ್ಪಟ್ಟರು. ಈ ಸಂದರ್ಭ ಮಾತನಾಡಿದ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರು, ಪಕ್ಷದ ಸಂಘಟನೆಯ ಬೆಳವಣಿಗೆ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಯೂನಿಯನ್ ಸದಸ್ಯ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಮಾತನಾಡಿ, ಗಿಡ ಬೆಳೆದು ಮರವಾಗಿ ಹಲವರಿಗೆ ಆಶ್ರಯ ನೀಡುತ್ತಾ ಪರೋಪಕಾರಿಯಾಗಿರುವಂತೆ ಬಿಜೆಪಿ ಸದಸ್ಯತ್ವ ಅಭಿಯಾನದಡಿ ಸೇರ್ಪಡೆಗೊಂಡ ಸಾರ್ವಜನಿಕರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಜನರಿಗೆ ನೆರವಾಗಬೇಕು ಎಂದರು. ಇದೇ ವೇಳೆ ಅವರು ಸ್ವ ಉದ್ಯೋಗ ನಡೆಸುವವರಿಗೆ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ರಾಜೇಶ್ ಬಿಆರ್ ನಗರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು .
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…