ಪುಂಜಾಲಕಟ್ಟೆ

ಗೋಮಾಂಸ ಅಕ್ರಮ ಸಾಗಾಟ ಪತ್ತೆ, ಮೂವರ ಬಂಧನ

ರಿಕ್ಷಾವೊಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ವಾಹನ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು

ಇಲ್ಲಿನ ನಿವಾಸಿಗಳಾದ ಅಬ್ದುಲ್ ರಝಾಕ್, ರಾಝಿಕ್ ಹಾಗೂ ರಿಯಾಝ್ ಎಂಬವರನ್ನು ಪೊಲೀಸರು ವಶಕ್ಕೆಪಡೆಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿನ ಮನೆಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ದನವನ್ನು ವಧೆ ಮಾಡಿ, ರಿಕ್ಷಾದಲ್ಲಿ ಸಾಗಿಸಲಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 60 ಕೆ.ಜಿ. ದನದ ಮಾಂಸ, ಆಟೊರಿಕ್ಷಾ, ವಧೆ ಮಾಡಲು ಉಪಯೋಗಿಸಿದ ಸಲಕರಣೆಗಳ ಸಹಿತ ಮೂವರನ್ನು ವಶಕ್ಕೆಪಡೆಯಲಾಗಿದೆ. ವಶಪಡಿಸಿಕೊಂಡಿರುವ ಸೊತ್ತುಗಳ ಮೌಲ್ಯ 1.22 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts