ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ ಸಮ್ಮುಖ ಹಸ್ತಾಂತರ ಕಾರ್ಯ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಒಂದು ಕೋಟಿ ಮುವತ್ತು ಲಕ್ಷ ರೂ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ಮಂಚಿ, ಇರಾ, ಕೊಲ್ನಾಡು, ಸಾಲೆತ್ತೂರು ಗ್ರಾಮ ಪಂಚಾಯತ್ ಗಳ ವ್ಯಾಪ್ತಿಗೊಳಪಡುವ ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣವಾಗಿದ್ದು, ಕೊಲ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್ ಎಸ್ ಮಹಮ್ಮದ್, ತಾಲೂಕು ಪಂಚಾಯತ್ ಉಪಾದ್ಯಕ್ಷರಾದ ಅಬ್ಬಾಸ್ ಅಲಿ, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಮೀಳ ,ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ವೈದ್ಯಾಧಿಕಾರಿ ಡಾ.ರೋಹಿಣಿ,ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ಜಿ ಎಮ್, ಮೊಯ್ದೀನ್ ಕುಂಞಿ, ಪುಷ್ಪ ಕಾಮತ್, ಪ್ರತಿಮ, ಗುತ್ತಿಗೆದಾರರಾದ ಪುಶ್ಪರಾಜ್ ಶೆಟ್ಟಿ ಇನ್ನಿತರು ಈ ಸಂಧರ್ಭ ಉಪಸ್ತಿತರಿದ್ದರು.