ವಾಮದಪದವು

ಸಿದ್ಧಕಟ್ಟೆ ಸರಕಾರಿ ಕಾಲೇಜಲ್ಲಿ ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ

www.bantwalnews.com

ಜಾಹೀರಾತು

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಪ್ರಾಯೋಜಕತ್ವದಲ್ಲಿ ಕಾಲೇಜಿನ ಈ ಸಾಲಿನ ರೋಟರ್‍ಯಾಕ್ಟ್ ಕ್ಲಬ್ ಪದಗ್ರಹಣ ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಲೊರೆಟ್ಟೋ ಹಿಲ್ಸ್ ರೋಟರಿ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಉದ್ಘಾಟಿಸಿ, ಪದಗ್ರಹಣ ನೆರವೇರಿಸಿದರು.

ನಿವೃತ್ತ ಮುಖ್ಯೋಪಾಧ್ಯಾಯ ಸಂಕಪ್ಪ ಶೆಟ್ಟಿ ಮಾತನಾಡಿ, ಅಪಾರವಾದ ಯುವಶಕ್ತಿ ನಮ್ಮ ದೇಶದಲ್ಲಿದೆ, ಇದು ಸರಿಯಾದ ದಾರಿಯಲ್ಲಿ ಮುಂದುವರೆದರೆ ನಾವು ಕನಸು ಕಾಣುತ್ತಿರುವ ಸದೃಢ ರಾಷ್ಟ್ರದಿಂದ ಸಾಧ್ಯ. ಇಂದು ಹಳ್ಳಿ ಹಳ್ಳಿಗಳಲ್ಲೂ ಉತ್ತಮ ಶಿಕ್ಷಣ ಸಿಗುವ ನಿಟ್ಟಿನಲ್ಲಿ ದೇಶ ಸಾಗಿದೆ. ಹಳ್ಳಿಗಳಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ ಇದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಾಗದೆ, ಅದರಲ್ಲೂ ನಮ್ಮ ಜೀವನವನ್ನು ಉತ್ತಮಗೊಳಿಸುವತ್ತ ಅವಶ್ಯಕವಾದ ಮಾನವಿಯ ಮೌಲ್ಯಗಳನ್ನು ರೂಢಿಸಿಕೊಂಡು ದೇಶಕ್ಕಾಗಿ ಕಾಳಜಿ ವಹಿಸುವಂತೆ ರೂಪುಗೊಳ್ಳಬೇಕು. ಈ ನಿಟ್ಟಿನಲ್ಲಿ ನೂತನ ರೋಟಾರ್‍ಯಾಕ್ಟ್ ಕ್ಲಬ್ ಪದಾಧಿಕಾರಿಗಳು ಅಲ್ಲದೆ ಎಲ್ಲಾ ಸದಸ್ಯರು ಉತ್ತಮ ಚಿಂತನೆ ಮಾಡಿ ಸಮಾಜಮುಖಿ ಕಾರ್ಯ ಮಾಡಿ ನಮ್ಮಲ್ಲಿ ಸೇವಾ ಮನೋಭಾವ ರೂಢಿಸಿಕೊಳ್ಳಿ ಎಂದರು. ಗ್ರಾಮೀಣ ಪರಿಸರದಲ್ಲಿ ನಿಜವಾದ ಜೀವನ ಮೌಲ್ಯ, ಮಾನವೀಯ ಸಂಬಂಧಗಳು ಹುಟ್ಟಿಕೊಳ್ಳುತ್ತವೆ. ಇಲ್ಲಿ ಜನರ ಒಡನಾಟ ಸಾಧ್ಯ ಪರಸ್ಪರ ಕಷ್ಟಕ್ಕೆ  ಸಹಕರಿಸುವುದು ಸಾಧ್ಯ. ಆದ್ದರಿಂದ ಆ ಒಳ್ಳೆಯ ಗುಣಗಳ ಜೊತೆಗೆ ಮಾನವೀಯ ಮೌಲ್ಯಗಳಾದ ದಯೆ, ಕರುಣೆ, ಅನುಕಂಪ, ಕಷ್ಟಕ್ಕೆ ಸ್ಪಂದಿಸುವುದು ಇತ್ಯಾದಿಗಳನ್ನು ನಾವು ರೂಢಿಸಿಕೊಂಡು ಸತ್ಪ್ರಜೆಗಳಾಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪದ್ಮರಾಜ ಬಲ್ಲಾಳ್ ರೋಟರಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಹಲವಾರು ಅವಕಾಶಗಳಿವೆ. ಈ ನಿಟ್ಟಿನಲ್ಲಿ  ವಿದ್ಯಾರ್ಥಿಗಳು  ನಿಯೋಜಿತ ತಂಡದ ನೇತೃತ್ವದಲ್ಲಿ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ತಾವು ಬೆಳೆದ ಸುತ್ತಲಿನ ಸಮಾಜಕ್ಕೆ ದುಡಿಯುವ ರೋಟರಿ ಧ್ಯೇಯದೊಂದಿಗೆ ಒಟ್ಟಾಗಿ ಶ್ರಮಿಸುವಂತಾಗಲಿ ಎಂದು ಆಶಿಸಿದರು. ಹಾಗೆಯೇ ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆಗೆ ಮುಂದಿನ ದಿನಗಳಲ್ಲಿಯೂ ಉತ್ತಮ ಸಹಕಾರ ನೀಡುವ ಭರವಸೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಭಟ್, ಬಂಟ್ವಾಳ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ನಾರಾಯಣ ಹೆಗ್ಡೆ, ರೋಟಾರ್‍ಯಾಕ್ಟ್ ಚೇರಮನ್ ಪ್ರಭಾಕರ ಪ್ರಭು , ರೋಟರಿ ಕ್ಲಬ್ ಬಂಟ್ವಾಳ ಲೊರೆಟೊ ಹಿಲ್ಸ್ ಕಾರ್ಯದರ್ಶಿ ಶ್ರುತಿ ಮಾಡ್ತಾ , ನಿಕಟಪೂರ್ವ ಅಧ್ಯಕ್ಷರಾದ ಅವಿಲ್ ಮೆನೇಜಸ್,  ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ,  ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಸುಕೇಶ್ , ನಿಯೋಜಿತ ಅಧ್ಯಕ್ಷ ಗುರುಪ್ರಸಾದ್, ಮಾರ್ಗದರ್ಶಕರಾದ  ಹನುಮಂತಯ್ಯ ಜಿಎಚ್, ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ಹಾಗೂ ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್‌ನ ವಿವಿಧ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.

ದ್ವಿತೀಯ ಬಿ. ಕಾಂ. ವಿದ್ಯಾರ್ಥಿನಿ ಚೈತ್ರಾ ನಿರೂಪಿಸಿದ ಕಾರ್ಯಕ್ರಮದಲ್ಲಿ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಅಧ್ಯಕ್ಷರಾದ ಪದ್ಮರಾಜ ಬಲ್ಲಾಳ್ ಸ್ವಾಗತಿಸಿದರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ನಾರಾಯಣ ಹೆಗ್ಡೆ ಪ್ರಾಸ್ತಾವಿಕವಾಗಿ ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್‌ನ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಈ ಸಂದರ್ಭ ಕಾಲೇಜಿನ ಗ್ರಂಥಪಾಲಕರಾದ ಡಾ.ಶ್ರೀನಿವಾಸ ಅವರು ಇತ್ತೀಚೆಗೆ ಡಾಕ್ಟರೇಟ್ ಪದವಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ವತಿಯಿಂದ ಗೌರವಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts