ವಿಟ್ಲ

ಕರೋಪಾಡಿಯಲ್ಲಿ ಕಾಂಗ್ರೆಸ್ ನಿಂದ ‘ಪಂಚಾಯತ್ ಮಿಲನ’


ಕರೋಪಾಡಿ ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ ಕಾರ್ಯಕ್ರಮ ಮಿತ್ತನ್ನಡ್ಕ ಜಂಕ್ಷನ್‌ನಲ್ಲಿ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಒಗ್ಗಟ್ಟಿನಿಂದ ನಾವೆಲ್ಲರೂ ದುಡಿಯಬೇಕಾಗಿದೆ ಎಂದು ವಿನಂತಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಸೋಲಿನ ಬಗ್ಗೆ ಪರಮಾವರ್ಶಿಸಿದರು.

ಜಾಹೀರಾತು

ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್.ಎಸ್ ಮಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯಾತ್ ಸದಸ್ಯರಾದ ಉಸ್ಮಾನ್ ಕರೋಪಾಡಿ, ಮುಖಂಡರಾದ ಇದಿನಬ್ಬ ಕಲ್ಲಡ್ಕ, ಸಿದಿಕ್ ಸೆರಾವು, ಕುಂಞಣ್ಣ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ವಲಯ ಅಧ್ಯಕ್ಷರಾದ ಸೀತರಾಮ್ ಭಟ್ ಸ್ವಾಗತಿಸಿ ಅನ್ವರ್ ಕರೋಪಾಡಿ ವಂದನಾರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ