ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಗದ್ದೆಯಲ್ಲಿ ಬೀಜ ಬಿತ್ತುವ ಮೂಲಕ ಕೃಷಿ ಚಟುವಟಿಕೆಗಳ ಕುರಿತು ಪ್ರತ್ಯಕ್ಷ ವೀಕ್ಷಣೆ ನಡೆಸಿದರು.
ಕಾಲೇಜಿನ ಸಮೀಪದ ಕಮಾಲಾಧರ ಶೆಟ್ಟಿಗಾರ್ ಗದ್ದೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೀಜ ಬಿತ್ತನೆ ಮಾಡುವ ವಿಧಾನವನ್ನು ತಿಳಿಸಲಾಯಿತು.
ಸ್ವತಃ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಬಿತ್ತನೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ನಡಿಗೆ ಗದ್ದೆಯ ಕಡೆಗೆ ಎಂಬ ಘೋಷವಾಕ್ಯದಡಿ ಕೃಷಿಯಲ್ಲಿ ಜರಗುವ ಹಲವಾರು ಕಾರ್ಯಗಳಲ್ಲಿ ಮೊದಲನೆಯದಾದ ಭೂಮಿ ಉಳುವ ಹಾಗೂ ಬೀಜ ಬಿತ್ತುವ ವಿಧಾನವನ್ನು ತೋರಿಸಲಾಯಿತು. ಕೃಷಿಯಿಂದ ವಿಮುಕ್ತರಾಗುತ್ತಿರುವ ಯುವಜನತೆಗೆ ಮರಳಿ ಕೃಷಿಗೆ ಕರೆದುಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಸತ್ಯನಾರಾಯಣ ಭಟ್, ರಾಷ್ಟ್ರೀಯ ಸೇವಾಯೋಜನಾ ಘಟಕದ ಯೋಜನಾಧಿಕಾರಿಗಳಾದ ದೇವಿಪ್ರಸಾದ್ ಸಹಾಯಕ ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸೌಮ್ಯ ಹೆಚ್.ಕೆ , ಸುಮಾರು ೩೫ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.