ಬಂಟ್ವಾಳ

ಗಣ್ಯರು, ಅಭಿಮಾನಿಗಳ ಕಂಬನಿಯೊಂದಿಗೆ ಡಾ. ಏರ್ಯ ರಿಗೆ ಅಂತಿಮ ನಮನ

ಶನಿವಾರ ರಾತ್ರಿ ನಿಧನ ಹೊಂದಿದ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಅಂತ್ಯಕ್ರಿಯೆ ಭಾನುವಾರ ಸಂಜೆ ಅವರ ಮನೆ ಏರ್ಯಬೀಡಿನಲ್ಲಿ ಸೇರಿದ್ದ ಬಂಧು, ಅಭಿಮಾನಿಗಳ ಸಮ್ಮುಖ ನಡೆಯಿತು.

ಜಾಹೀರಾತು

ಅವರ ಅಪೇಕ್ಷೆಯಂತೆ ಏರ್ಯ ಬೀಡು ಮನೆ ವಠಾರದ ಮಜಲು ಗದ್ದೆಯಲ್ಲಿ ಚಿತೆ ನಿರ್ಮಿಸಿ ಅಳಿಯ ಏರ್ಯ ಬಾಲಕೃಷ್ಣ ಹೆಗ್ಡೆ ಅಗ್ನಿ ಸ್ಪರ್ಶ ಮಾಡಿದರು. ಕುಟುಂಬದ ಹಿರಿಯರಾದ ಗೋಪಾಲಕೃಷ್ಣ ರೈ, ಡಾ| ರಾಜಾರಾಮ ಶೆಟ್ಟಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಸಹಸ್ರಾರು ಸಂಖ್ಯೆಯಲ್ಲಿ ಬೆಳಗ್ಗಿನಿಂದ ಸಂಜೆ ತನಕ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ಅವರ ಅಭಿಮಾನಿಗಳು, ಬಂಧು ಮಿತ್ರರು ಏರ್ಯಬೀಡು ಮನೆಗೆ ಆಗಮಿಸಿ ರಾಜಾಂಗಣದಲ್ಲಿ ಅಂತಿಮ ನಮನ ಸಲ್ಲಿಸಿದರು.

ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಮುಖರಾದ ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಸಂಸದ ನಳಿನ್  ಕುಮಾರ್ ಕಟೀಲು, ಮಾಜಿ ಸಚಿವರಾದ ಯು.ಟಿ.ಖಾದರ್, ಬಿ.ರಮಾನಾಥ ರೈ, ನಿಟ್ಟೆ ವಿವಿ ಕುಲಪತಿ ಎನ್. ವಿನಯ್ ಹೆಗ್ಡೆ,  ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ  ಡಾ. ಮೋಹನ ಆಳ್ವ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ. ರುಕ್ಮಯ ಪೂಜಾರಿ, ಜೆ.ಆರ್.ಲೋಬೊ,  ಅಮರನಾಥ್ ಶೆಟ್ಟಿ, ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ, ಧರ್ಮಸ್ಥಳದ ಡಾ. ಯಶೋವರ್ಮ,  ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು,   ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ,  ಜಾನಪದ ವಿವಿ ಮಾಜಿ ಕುಲಪತಿ ಡಾ. ಕೆ.ಚಿನ್ನಪ್ಪ ಗೌಡ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಪ್ರಮುಖರಾದ  ಬಸ್ತಿ ವಾಮನ ಶೆಣೈ, ಲೇಖಕ ಸುರೇಂದ್ರ ರಾವ್, ರಾ.ಸ್ವ. ಸಂಘದ ಮಂಗಳೂರು ವಿಭಾಗ ಸಂಘ ಚಾಲಕ  ಗೋಪಾಲ ಚೆಟ್ಟಿಯಾರ್,  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮರಾಯ ಆಚಾರ್ಯ, ಹರಿಕೃಷ್ಣ ಬಂಟ್ವಾಳ, ರಾಣಿ ಅಬ್ಬಕ್ಕ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸದಾನಂದ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಅಶ್ವಿನಿ ಕುಮಾರ್ ರೈ, ಶೆಡ್ಯೆ ಮಂಜುನಾಥ ಭಂಡಾರಿ. ಜಿಪಂ ಸದಸ್ಯ ತುಂಬೆ ಚಂದ್ರಪ್ರಕಾಶ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ವಿಶ್ವನಾಥ ಬಂಟ್ವಾಳ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಪುರುಷೋತ್ತಮ ಸಾಲಿಯಾನ್,  ದೀಪಿಕಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್, ಎಚ್. ಎನ್. ಹೆಬ್ಬಾರ್, ಸೀತಾರಾಮ್ ಭಟ್, ಬಾಬು ಗೌಡ ಸಹಿತ ಇತರರು ಅಂತಿಮ ನಮನ ಸಲ್ಲಿಸಿದರು.

ಜಾಹೀರಾತು

 

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಏಕರೂಪ ಶಿಕ್ಷಣ ನೀತಿ ಕುರಿತು ಭಾರತ ಉಳಿಸಿ ಹೋರಾಟ ನಡೆಸುತ್ತಿರುವ ಪ್ರಕಾಶ್ ಅಂಚನ್, ಸಾಮಾಜಿಕ ಹೋರಾಟಗಾರ ಪಿ.ಎ.ರಹೀಂ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ