www.bantwalnews.com Editor: Harish Mambady
ಗ್ರಾಮೋತ್ಸವದಲ್ಲಿ ರಾಮನ ತತ್ವವಡಗಿದೆ. ಗ್ರಾಮದ ಅಭಿವೃದ್ಧಿಯಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಒಡಿಯೂರು ಗ್ರಾಮೋತ್ಸವ, ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗುರುವಂದನೆಯ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಮೊಬೈಲ್ ಅಪ್ಲಿಕೇಶನ್ ಅನಾವರಣಗೊಳಿಸಿ ಆಶೀರ್ವಚನ ನೀಡಿದರು.
ಪೆನ್ಸಿಲ್ ಬಾಕ್ಸ್ ಕನ್ನಡ ಚಲನಚಿತ್ರದ ಹಾಡುಗಳ ಅನಾವರಣ ಮಾಡಿದ ಸಾಧ್ವಿ ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಿ ಗುರುಗಳ ಮಾರ್ಗದರ್ಶನ ಪಡೆದು ಮಾಡುವ ಕಾರ್ಯ ಯಶಸ್ವಿಯಾಗುತ್ತದೆ. ಎಂದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಮಾತನಾಡಿ ಪಾಪಗಳು ಕ್ಷಯವಾಗಿ, ಒಳಿತಿನ ರಕ್ಷಣೆಯಾಗುವ ಜಾಗ ಕ್ಷೇತ್ರವಾಗುತ್ತದೆ. ಎಂದರು.
ಜನ್ಮದಿನೋತ್ಸವ ಸಮಿತಿಯ ಮಹಾರಾಷ್ಟ್ರ ಘಟಕ ಅಧ್ಯಕ್ಷ ವಾಮಯ್ಯ ಬಿ. ಶೆಟ್ಟಿ ಚೆಂಬೂರು, ಪುಣೆ ಶ್ರೀ ಗುರುದೇವ ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ರೋಹಿತ್ ಡಿ.ಶೆಟ್ಟಿ ನಗ್ರಿಗುತ್ತು, ಕೃಷ್ಣ ಎಲ್.ಶೆಟ್ಟಿ ಮಾಹಿಮ್, ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಪ್ರಧಾನ ಕೋಶಾಽಕಾರಿ ಎ.ಅಶೋಕ್ ಕುಮಾರ್ ಬಿಜೈ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಉಡುಪಿ ಘಟಕ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಪಟ್ಲಗುತ್ತು ಮಹಾಬಲ ಶೆಟ್ಟಿ, ಲೀಲಾಕ್ಷ ಕರ್ಕೇರ, ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯ, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ಮಹಾರಾಷ್ಟ್ರ ಘಟಕ ಅಧ್ಯಕ್ಷೆ ರೇವತಿ ವಾಮಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಾಧ್ವಿ ಶ್ರೀ ಮಾತಾನಂದಮಯೀ, ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಜಿ.ಶೆಟ್ಟಿ ತಾಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ವೇಮೂ ಚಂದ್ರಶೇಖರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ ನಡೆಯಿತು.
ಬೆಳಗ್ಗೆ ಗಣಪತಿ ಹವನ, ಶ್ರೀಗುರು ಪಾದಪೂಜೆ, ಪಾದುಕಾರಾಧನೆ, ಗುರುಕುಲದ ಪುಟಾಣಿಗಳಿಂದ ಗುರುನಮನ, ಉಯ್ಯಾಲೆ ಸೇವೆ, ಲಡ್ಡುಗಳಿಂದ ತುಲಾಭಾರ ನಡೆಯಿತು.
ನವನಿಕೇತನ ಯೋಜನೆಯಡಿ ನಿರ್ಮಾಣವಾದ ಮನೆಯ ಕೀಲಿಕೈ ಚಂದ್ರಾವತಿ ನಾಯ್ಕ ಅಡ್ವಾಯಿ ಅವರಿಗೆ ನೀಡಲಾಯಿತು. ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಒಡಿಯೂರು ವತಿಯಿಂದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಶಾಲಾ ವಾಹನ ಕೊಡುಗೆಯಾಗಿ ನೀಡಲಾಯಿತು.
ಪ್ರೌಢ ಶಾಲಾ ಮಟ್ಟದ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಸಿಗಳ ವಿತರಣೆ, ಮನೆ ದುರಸ್ತಿಗೆ ನೆರವು, ಅನಾರೋಗ್ಯಕ್ಕೆ ನೆರವು, ಸಂಘ ಸಂಸ್ಥೆ– ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ನೆರವು ನೀಡಲಾಯಿತು.
ಸೇವಾ ಗ್ರಾಮಗಳ ಸಮಿತಿಯ ಅಧ್ಯಕ್ಷರಿಗೆ ಗೌರವಾರ್ಪಣೆ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಗೆ ಉಚಿತ ಕಚೇರಿ ನೀಡುವ ಬಂಧುಗಳಿಗೆ ಗೌರವಾರ್ಪಣೆ, ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಸುಮನ ಮಾಧವ ಸುವರ್ಣ ಅವರಿಗೆ ಗೌರವಾರ್ಪಣೆ ಮಾಡಲಾಯಿತು.
ಯಶವಂತ ವಿಟ್ಲ ಸ್ವಾಗತಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ನಿರ್ದೇಶಕ ಕಿರಣ್ ಉರ್ವ ವರದಿ ಮಂಡಿಸಿದರು. ಬಂಟ್ವಾಳ ವಿಸ್ತರಣಾಽಕಾರಿ ಸದಾಶಿವ ಅಳಿಕೆ ಪ್ರಸ್ತಾವನೆಗೈದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎ. ಸುರೇಶ್ ರೈ ಸಹಕಾರಿ ಆಪ್ ಬಗ್ಗೆ ಮಾಹಿತಿ ನೀಡಿದರು. ಸದಾಶಿವ ಶೆಟ್ಟಿ ಕನ್ಯಾನ, ಲೀಲಾ ಪಾದೆಕಲ್ಲು ಅವರು ಬಹುಮಾನ ವಿಜೇತರ ಪಟ್ಟಿ ಓದಿದರು. ಸೇರಾಜೆ ಗಣಪತಿ ಭಟ್ ವಂದಿಸಿದರು. ಜಯಪ್ರಕಾಶ್ ಶೆಟ್ಟಿ ಮತ್ತು ಪ್ರಕಾಶ್ ಕೆ.ಶೆಟ್ಟಿ ಪೇಟೆಮನೆ ನಿರೂಪಿಸಿದರು.