ವಿದ್ಯುತ್ ಶಾಕ್ ನಿಂದ ಯುವಕ ಸಾವು

ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಎಡ್ಜ್ ಫ್ಯೂಸ್ ಹಾಕಲೆಂದು ವಿದ್ಯುತ್ ಪರಿವರ್ತಕಕ್ಕೇರಿದ ಯುವಕ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಕರೋಪಾಡಿ ಗ್ರಾಮದ ಕುರೋಡಿ ಫೆಲಿಕ್ಸ್ ಮೊಂತೆರೊ(39) ಸಾವನ್ನಪ್ಪಿದವರು.

ಜಾಹೀರಾತು

ಮೆಸ್ಕಾಂ ಗುತ್ತಿಗೆ ಆಧಾರದ ನೌಕರರಾದ ಇವರು ಇವತ್ತು ಕೆಲಸಕ್ಕೆ ಹಾಜರಾಗಿರಲಿಲ್ಲ. ಹೈಟೆನ್ಶನ್ ಲೈನ್ ಸ್ವಿಚ್ ಆಫ್ ಮಾಡಿದ್ದರೂ ಒಂದು ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು. ಇದನ್ನು ಗಮನಿಸದ ಫೆಲಿಕ್ಸ್ ಎಡ್ಜ್ ಫ್ಯೂಸ್ ಹಾಕಲೆತ್ನಿಸಿದಾಗ ವಿದ್ಯುತ್ ಶಾಕ್ ಬಡಿದಿದೆ. ಅವರು ವಿದ್ಯುತ್ ಪರಿವರ್ತಕದಿಂದ ಎಸೆಯಲ್ಪಟ್ಟು ಕೆಳಗೆ ಬಿದ್ದು ಸಾವನ್ನಪ್ಪಿದರು ಎನ್ನಲಾಗಿದೆ.

ಹಿಂದು ಜಾಗರಣಾ ವೇದಿಕೆ ಕರೋಪಾಡಿ ಘಟಕದ ಅಧ್ಯಕ್ಷ ವಿನೋದ್ ಶೆಟ್ಟಿ ಪಟ್ಲ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿದ್ಯುತ್ ಶಾಕ್ ನಿಂದ ಯುವಕ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*