ತೆರಿಗೆಯ ಜೊತೆಗೆ ಕಸ ಸಂಗ್ರಹಣೆಗೆ ಅಡ್ವಾನ್ಸ್ ಶುಲ್ಕ ಸಂಗ್ರಹಿಸುವುದನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ನಿಯೋಗ ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಮೂಲಕ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿತು.
ಪುರಸಭೆಯ ಈ ಕ್ರಮದಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಸ ಸಂಗ್ರಹಣೆಯ ಸೇವೆಯನ್ನು ಬಳಸದಿರುವ ನಗರವಾಸಿಗಳಿಗೂ ತೆರಿಗೆಯ ಜೊತೆ ಕಸ ಸಂಗ್ರಹಣೆಯ ಶುಲ್ಕ ಪಾವತಿಸಲು ಒತ್ತಡ ಹೇರುವುದು ಸರಿಯಲ್ಲ ಹಾಗಾಗಿ ಈ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ಮಾಜಿ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ, ಬಿ.ವಾಸು ಪೂಜಾರಿ, ಮಹಮ್ಮದ್ ಶರೀಫ್, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ. ಮಹಮದ್ ನಂದರಬೆಟ್ಟು, ಜನಾರ್ಧನ ಚಂಡ್ತಿಮಾರ್, ಜಯಂತಿ ಮಣಿ, ಗಾಯತ್ರಿ ಪ್ರಕಾಶ್, ಜೆಸಿಂತಾ, ಸಿದ್ದಿಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯ ಪದ್ಮಶೇಖರ್ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ. ಮಲ್ಲಿಕಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪಕ್ಷದ ಮುಖಂಡರಾದ ಮಾಯಿಲಪ್ಪ ಸಾಲಿಯಾನ್. ವಸಂತಿ ಚಂದಪ್ಪ, ಜಗದೀಶ್ ಭಂಡಾರಿಬೆಟ್ಟು, ಲೋಕೇಶ ಸುವರ್ಣ, ಜಯಂತಿ ಪೂಜಾರಿ, ಮಲ್ಲಿಕಾ ಪಕ್ಕಳ, ವೆಂಕಪ್ಪ ಪೂಜಾರಿ ಬಂಟ್ವಾಳ ಮೊದಲಾದವರಿದ್ದರು.