ಬಂಟ್ವಾಳ

ಅರಳದಲ್ಲಿ ಕಾಂಗ್ರೆಸ್ ನಿಂದ ಪಂಚಾಯತ್ ಮಿಲನ

ಬಂಟ್ವಾಳ ಕ್ಷೇತ್ರದ ಅರಳ ಗ್ರಾಪಂನಲ್ಲಿ ವಲಯ ಮಟ್ಟದ ಕಾಂಗ್ರೆಸ್ ಪಂಚಾಯತ್ ಮಿಲನ ಕುಟ್ಟಿಕಳ ಜಂಕ್ಷನ್ ನಲ್ಲಿ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಪಪ್ರಚಾರ, ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಧಾನ ಸಭೆ ಹಾಗೂ ಲೋಕ ಸಭೆ ಚುನಾವಣೆಯ ಮತಗಳ ಅಂಕಿ ಅಂಶವನ್ನು ಕಾರ್ಯಕರ್ತರ ಮುಂದೆ ಮಂಡಿಸಿ ಪಕ್ಷದ ಹಿನ್ನಡೆಯ ಬಗ್ಗೆ  ಚರ್ಚಿಸಿದರು. ಪಕ್ಷದ ಮುಖಂಡರಾದ ಜಗದೀಶ್ ಕೊಯಿಲಾ, ರಮೇಶ್ ನಾಯಕ್ ರಾಯಿ, ರಿಯಾಜ್ ಹುಸೈನ್ ಬಂಟ್ವಾಳ, ದೇವಪ್ಪ ಕರ್ಕೆರ ಕರ್ಪೆ ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಹಾಗೂ ಬೂತ್ ಸಮಿತಿಯನ್ನು ಪುನರಚಿಸಿ ಅರಳ ಗ್ರಾಮ ಪಂಚಾಯತಿ ಸಮಿತಿಯ ಅದ್ಯಕ್ಷರಾಗಿ ಅಶ್ರಪ್ ಕುಟ್ಟಿಕಲ ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು. ಬೂತ್ ಸಮಿತಿಯ ಅದ್ಯಕ್ಷರಾಗಿ ಪುರಂದರ ಶೆಟ್ಟಿ, ಸಂತೋಷ್ ಜೋಯ್ ಪಿಂಟೊ, ಉಸ್ಮಾನ್, ಹನೀಪ್ ಇವರನ್ನು ಅಯ್ಕೆಮಾಡಲಾಯಿತು. ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜೈಸನ್ ಲೋಬೊ, ಮಹಿಳಾ ಅಧ್ಯಕ್ಷರಾಗಿ ಶಶಿಕಲಾ ಇವರನ್ನು ಆಯ್ಕೆಮಾಡಲಾಯಿತು. ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬೂತ್ ಸಮಿತಿಯ ಅದ್ಯಕ್ಷ ಉಸ್ಮಾನ್ ಸ್ವಾಗತಿಸಿದರು. ಪಂಚಾಯತ್ ಸದಸ್ಯ ಎಂ. ಬಿ ಅಶ್ರಪ್ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts