ಬಂಟ್ವಾಳ: ತಂತಿಯಲ್ಲಿ ಬಟ್ಟೆ ಒಣಗಿಸುವ ಸಂದರ್ಭ ವಿದ್ಯುತ್ ಪ್ರವಹಿಸಿ ನರಿಕೊಂಬು ಗ್ರಾಮದ ಜನತಾಗೃಹ ಮನೆ ನಿವಾಸಿ ಗೀತಾ (54) ಮೃತಪಟ್ಟಿದ್ದಾರೆ. ಸ್ಥಳೀಯ ವಿಶ್ವನಾಥ ಬಂಗೇರ ಎಂಬವರ ಪತ್ನಿ ಗೀತಾ ಶನಿವಾರ ಮಧ್ಯಾಹ್ನ ಮನೆಯಲ್ಲಿ ಬಟ್ಟೆ ಒಣಗಿಸುವ ಸಂದರ್ಭ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಅವರು ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಗೀತಾ ಅವರಿಗೆ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ಇದ್ದಾರೆ.
ಜಾಹೀರಾತು
ಬಂಟ್ವಾಳ ಆಸ್ಪತ್ರೆಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ಗ್ರಾಮ ಲೆಕ್ಕಾಧಿಕಾರಿ ಪ್ರವೀಣ್ ಸಿಬ್ಬಂದಿ ಸದಾಶಿವ ಕೈಕಂಬ, ಲಕ್ಷ್ಮಣ ನರಿಕೊಂಬು, ಶಿವ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿದ್ಯುತ್ ಸ್ಪರ್ಶ, ಮಹಿಳೆ ಸಾವು"