ಬಂಟ್ವಾಳ: ತಂತಿಯಲ್ಲಿ ಬಟ್ಟೆ ಒಣಗಿಸುವ ಸಂದರ್ಭ ವಿದ್ಯುತ್ ಪ್ರವಹಿಸಿ ನರಿಕೊಂಬು ಗ್ರಾಮದ ಜನತಾಗೃಹ ಮನೆ ನಿವಾಸಿ ಗೀತಾ (54) ಮೃತಪಟ್ಟಿದ್ದಾರೆ. ಸ್ಥಳೀಯ ವಿಶ್ವನಾಥ ಬಂಗೇರ ಎಂಬವರ ಪತ್ನಿ ಗೀತಾ ಶನಿವಾರ ಮಧ್ಯಾಹ್ನ ಮನೆಯಲ್ಲಿ ಬಟ್ಟೆ ಒಣಗಿಸುವ ಸಂದರ್ಭ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಅವರು ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಗೀತಾ ಅವರಿಗೆ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ಇದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…