ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ಸಮೀಪದ ಪೊನ್ನೋಡಿ ನಿವಾಸಿ, ದಿ. ಬಾಲನ್ ಎಂಬವರ ಪುತ್ರ ಪ್ರಶಾಂತ್ ಯಾನೆ ಪಚ್ಚು ಪೊನ್ನೋಡಿ (39) ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದವರು ನಿಧನಹೊಂದಿದ್ದಾರೆ.
ಜಾಹೀರಾತು
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಪ್ರಶಾಂತ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ದಿ.ಬಾಲನ್ ಮತ್ತು ದಿ.ಸರೋಜಿನಿ ದಂಪತಿಯ ನಾಲ್ವರು ಪುತ್ರರ ಪೈಕಿ ಪ್ರಶಾಂತ್ ಮೂರನೇಯವರು.ಅವಿವಾಹಿತರಾಗಿರುವ ಇವರು ತನ್ನ ಲಾರಿಯಲ್ಲಿ ಡ್ರೈವರ್ ಆಗಿ ದುಡಿಯುದ್ದಿದ್ದರು.
ಅವರು ಇಬ್ಬರು ಸಹೋದರಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ. ಜ್ವರಕ್ಕೆ ಕಾರಣ ಡೆಂಗೆ ಎಂಬ ಕುರಿತು ಶಂಕೆ ವ್ಯಕ್ತಪಡಿಸಲಾಗಿದ್ದು, ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜ್ವರದಿಂದ ಬಳಲುತ್ತಿದ್ದ ಬಂಟ್ವಾಳ ಪೊನ್ನೋಡಿಯ ಯುವಕ ನಿಧನ"
Be the first to comment on "ಜ್ವರದಿಂದ ಬಳಲುತ್ತಿದ್ದ ಬಂಟ್ವಾಳ ಪೊನ್ನೋಡಿಯ ಯುವಕ ನಿಧನ"