ಸೋಮವಾರ ರಾತ್ರಿ ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾನುವಾರ ರಾತ್ರಿಯಿಂದಲೇ ಮಳೆ ಸುರಿಯುತ್ತಿದ್ದು ಗುಡುಗು, ಮಿಂಚು ಕಾಣಿಸುತ್ತಿದೆ. ಬಹುತೇಕ ವಾರದ ಬಳಿಕ ಈ ರೀತಿಯಾಗಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಮಂಗಳವಾರ ಶಾಲೆ, ಕಾಲೇಜುಗಳಿಗೆ ದ.ಕ. ಜಿಲ್ಲೆಯಲ್ಲಿ ರಜೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯಾರೂ ಅಧಿಕೃತವಾಗಿ ರಜೆ ಘೋಷಣೆ ಮಾಡಿಲ್ಲ.
ಸೋಮವಾರವೂ ಎಡೆಬಿಡದೆ ಭಾರೀ ಮಳೆ ಸುರಿದಿದ್ದು, ತಾಲೂಕಿನ ಮೂರು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ನಷ್ಟ ಉಂಟಾಗಿದೆ.
ಮೇರಮಜಲು ಗ್ರಾಮದ ಲೀಲಾವತಿ ಎಂಬವರ ಮನೆ, ಪುದು ಗ್ರಾಮದ ಅಚ್ಚಮ್ಮ ಎಂಬವರ ಮನೆ ಹಾಗೂ ರಾಯಿ ಗ್ರಾಮದ ಯಮುನಾ ಎಂಬವರ ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಬಗ್ಗೆ ಬಂಟ್ವಾಳ ವಿಪತ್ತು ನಿರ್ವಹಣಾ ವಿಭಾಗ ಮಾಹಿತಿ ತಿಳಿಸಿದೆ.
ಪುತ್ತೂರು, ಬೆಳ್ತಂಗಡಿ, ಮೂಲ್ಕಿ, ವಿಟ್ಲ, ಅನಂತಾಡಿ, ಸುರತ್ಕಲ್, ಕಡಬ, ಉಪ್ಪಿನಂಗಡಿ, ವೇಣೂರು, ನಾರಾವಿ, ಗುರುವಾಯನಕೆರೆ, ಧರ್ಮಸ್ಥಳ, ಕನ್ಯಾನ, ಬಿ.ಸಿ.ರೋಡು, ಮಾಣಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲಬ್ಬರ ಇದೆ.
www.bantwalnews.com Editor: Harish Mambady