
ಬಂಟ್ವಾಳ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿ 7.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಬೆಳಗ್ಗೆಯೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಅಂಗನವಾಡಿ, 10ನೇ ತರಗತಿವರೆಗಿನ ಶಾಲೆ, ಹೈಸ್ಕೂಲುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಈ ಕುರಿತು ಬಂಟ್ವಾಳನ್ಯೂಸ್ ಗೆ ಮಾಹಿತಿ ನೀಡಿದ್ದು, ಈಗಾಗಲೇ ಪ್ರಭಾರ ಬಿಇಒ ಅವರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸೋಮವಾರ ರಾತ್ರಿಯಿಡೀ ಭಾರಿ ಗಾಳಿ, ಮಳೆಯಾಗಿತ್ತು.
***
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ www.bantwalnews.com. ಸುದ್ದಿ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127


Be the first to comment on "ಭಾರೀ ಮಳೆ: ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ"