ಪ್ರಮುಖ ಸುದ್ದಿಗಳು

RED ALERT – ದ.ಕ, ಉಡುಪಿಯಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 7 ಮತ್ತು 8ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಆಡಳಿತವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲು ಸೂಚಿಸಲಾಗಿದೆ. ಮಳೆ, ಕೃತಕ ನೆರೆ, ಪ್ರವಾಹದ ಮುನ್ಸೂಚನೆ ಇರುವ ಕಾರಣ ಮುಂಜಾಗರೂಕತಾ ಕ್ರಮವಾಗಿ ಆಗಸ್ಟ್ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಉಡುಪಿ ಜಿಲ್ಲೆಯ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿವರೆಗೆ) .7ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಿದ್ದು, . 7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ

ಕೊಡಗು ಜಿಲ್ಲೆಯಲ್ಲಿ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

——–

ಜಾಹೀರಾತು

 www.bantwalnews.comಸಂಪಾದಕ: ಹರೀಶ ಮಾಂಬಾಡಿ

ಸುದ್ದಿ, ಲೇಖನಗಳಿಗೆ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ