Categories: ಬಂಟ್ವಾಳ

ತ್ಯಾಜ್ಯ ಅಡ್ವಾನ್ಸ್ ಶುಲ್ಕ ವಿರೋಧಿಸಿ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ ಪುರಸಭೆಯಲ್ಲಿ ವಾಸದ ಮನೆ ಮತ್ತು ವಾಣಿಜ್ಯ ಕಟ್ಟಡಗಳ ತೆರಿಗೆ ಪಾವತಿಯ ಸಂದರ್ಭದಲ್ಲಿ ಕಸ ಸಂಗ್ರಹಣೆ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲು ಮಾಡುವುದರ ವಿರುದ್ಧ ಕಾಂಗ್ರೆಸ್ ನಿಯೋಗ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಭೇಟಿಯಾಗಿ ಮನವ ಸಲ್ಲಿಸಿದೆ.

ಜಾಹೀರಾತು

ಈ ಸಂದರ್ಭ ಮಾತನಾಡಿದ ರೈ, ತೀರಾ ಜನವಿರೋಧಿ ಕ್ರಮವಾಗಿದೆ. ಕಸ ಸಂಗ್ರಹಣೆಯ ಸೇವೆಯನ್ನು ಬಳಸದಿರುವ ನಗರವಾಸಿಗಳಿಗೆ ತೆರಿಗೆ ಪಾವತಿಸಲು ಒತ್ತಾಯ ಹೇರುತ್ತಿರುವ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದುದರಿಂದ  ಕಸ ಸಂಗ್ರಹಣಾ ತೆರಿಗೆ ವಸೂಲು ಮಾಡುವುದನ್ನು ಪುರಸಭೆಯ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವ ತನಕ ತಕ್ಷಣದಿಂದ ತಡೆಹಿಡಿಯುವಂತೆ ಒತ್ತಾಯಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯಾತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪುರಸಭೆ ಸದಸ್ಯರಾದ ಮಹಮ್ಮದ್ ನಂದರಬೆಟ್ಟು., ಜನಾರ್ದನ ಚೆಂಡ್ತಿಮಾರ್ ,ಮಹಮ್ಮದ್ ಶೆರೀಫ್, ಲೋಲಾಕ್ಷ ಶೆಟ್ಟಿ, ಗಂಗಾಧರ ಪೂಜಾರಿ, ಮುಖಂಡರಾದ ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts