ಬಂಟ್ವಾಳ

ಗ್ರಾಮೀಣ ಸಮಸ್ಯೆ ನೀಗಿಸಲು ಪ್ರಾಮಾಣಿಕ ಪ್ರಯತ್ನ: ಯು.ಟಿ.ಖಾದರ್

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಮಂಗಳೂರು ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಜಾಹೀರಾತು

ಗುರುವಾರ ಇರಾ ಮಲಯಾಳಿ ಬಿಲ್ಲವ ಸಭಾಭವನದಲ್ಲಿ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗನುಗುಣವಾಗಿ ಹಂತ, ಹಂತದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿಪಂ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಗ್ರಾಪಂ ಸದಸ್ಯ ಬಿ.ಉಮ್ಮರ್, ಗೋಪಾಲ ಅಶ್ವಥದಡಿ, ಮೊಯಿದ್ದೀನ್ ಕುಂಞ, ರಮೇಶ್ ಪೂಜಾರಿ, ತುಳಸಿ, ಪಾರ್ವತಿ, ಸವಿತಾ, ಪಿಡಿಒ ನಳಿನಿ ಎ.ಕೆ ಮೊದಲಾದವರಿದ್ದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.