ಸರಕಾರದ ಸವಲತ್ತುಗಳು ಗ್ರಾಮೀಣ ಮಟ್ಟದಲ್ಲಿ ಕ್ಲಪ್ತ ಸಮಯದಲ್ಲಿ ಅತೀ ಶೀಘ್ರವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದಾರೆ.
ಜಾಹೀರಾತು
ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ ಗುರುವಾರ ನಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನ ನೀಡಿದರು.
ಸ್ಥಳೀಯ ಜನಪ್ರತಿನಿಧಿಗಳನ್ನು ಪಿಡಿಒಗಳು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರದ ಸವಲತ್ತನ್ನು ಅತೀ ಶೀಘ್ರವಾಗಿ ತಲುಪಿಸುವುದರ ಜೊತೆಗೆ ಗ್ರಾಮದ ಅಭಿವೃದ್ದಿಯ ನಿಟ್ಟಿನಲ್ಲು ಮುಂದಾಗಬೇಕೆಂದ ಶಾಸಕರು ಪಿಡಿಒಗಳ ಅಹವಾಲನ್ನು ಆಲಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಪಿಡಿಒಗಳಿಗೆ ಕಲವೊಂದು ಸಲಹೆ ,ಸೂಚನೆಯನ್ನು ನೀಡಿದರು.ತಾಲೂಕಿನ ವಿವಿಧ ಗ್ರಾಮಪಂಚಾಯತ್ ನ ಪಿಡಿಒಗಳು ಹಾಜರಿದ್ದು,ತಮ್ಮ,ತಮ್ಮ ಗ್ರಾಮದಲ್ಲಾದ ಪ್ರಗತಿಯನ್ನು ಮಂಡಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕ್ಲಪ್ತ ಸಮಯದಲ್ಲ ಸವಲತ್ತು ಒದಗಿಸುವ ಕೆಲಸ ಮಾಡಿ: ಪಿಡಿಒಗಳಿಗೆ ಶಾಸಕ ಸೂಚನೆ"
Be the first to comment on "ಕ್ಲಪ್ತ ಸಮಯದಲ್ಲ ಸವಲತ್ತು ಒದಗಿಸುವ ಕೆಲಸ ಮಾಡಿ: ಪಿಡಿಒಗಳಿಗೆ ಶಾಸಕ ಸೂಚನೆ"