ಬಂಟ್ವಾಳ

ಬಂಟ್ವಾಳ ಜಲದಿಗ್ಬಂಧನ – ಸಮಸ್ಯೆ ಇದ್ದರೆ ಕರೆ ಮಾಡಿ 08255-232120

ಶುಕ್ರವಾರ ರಾತ್ರಿಯಿಂದೀಚೆಗೆ ಬಂಟ್ವಾಳ ಪೇಟೆಯಿಡೀ ಜಲಾವೃತಗೊಂಡಿದೆ. ತಾಲೂಕಿನ ಹಲವು ಭಾಗಗಳು ಸಂಪರ್ಕ ಕಡಿತಗೊಂಡಿವೆ. ಹಲವೆಡೆ ವಿದ್ಯುತ್ತಿಲ್ಲ. ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ತಹಶೀಲ್ದಾರ್ ರಶ್ಮಿ ಎಸ್.ಆರ್, ಸಹಾಯಕ ಕಮಿಷನರ್ ರವಿಚಂದ್ರ ನಾಯಕ್, ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಎನ್.ಡಿ.ಆರ್.ಎಫ್, ಕೋಸ್ಟ್ ಗಾರ್ಡ್, ಹೋಂ ಗಾರ್ಡ್ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅಪಾಯದ ಸ್ಥಿತಿಯಲ್ಲಿರುವವರನ್ನು ರಕ್ಷಿಸಿದ್ದಾರೆ. ಇದುವರೆಗೆ 100ಕ್ಕೂ ಅಧಿಕ ಮನೆ, ಅಂಗಡಿ, ಮುಂಗಟ್ಟುಗಳು ಜಲಬಾಧಿತವಾಗಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಾತ್ರಿಯಿಡೀ ಪರಿಸರವಿಡೀ ಸಂಚರಿಸಿದ್ದಾರೆ. ಪಾಣೆಮಂಗಳೂರು ಶಾರದಾ ಪ್ರೌಢಶಾಲೆ, ಬಂಟ್ವಾಳ ಐಬಿಯಲ್ಲಿ ಗಂಜಿಕೇಂದ್ರ ತೆರೆಯಲಾಗಿದ್ದು, ಅಲ್ಲಿ ಸಂತ್ರಸ್ತರಿದ್ದಾರೆ. ಉಳಿದ ಬಾಧಿತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಸುರಕ್ಷಿತ ಜಾಗಕ್ಕೆ ಶಿಫ್ಟ್ ಮಾಡಲಾಗಿದೆ. ಫರಂಗಿಪೇಟೆ, ಬ್ರಹ್ಮರಕೂಟ್ಲು, ತಲಪಾಡಿ, ಅಜಿಲಮೊಗರು, ಬಂಟ್ವಾಳದ ಬಹುತೇಕ ಎಲ್ಲ ತೀರಪ್ರದೇಶಗಳು ಜಲಬಾಧಿತವಾಗಿವೆ. ಯಾರಾದರೂ ಸಿಕ್ಕಿಹಾಕಿಕೊಂಡಿದ್ದು, ಸಹಾಯ ಬಯಸಿದರೆ, 08255-232120 (ಕಂಟ್ರೋಲ್ ರೂಂ)ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಬೇಕು ಎಂಬುದು ಬಂಟ್ವಾಳನ್ಯೂಸ್ ಕಾಳಜಿಯೂ ಹೌದು. 

ಜಾಹೀರಾತು

www.bantwalnews.comಸಂಪಾದಕ: ಹರೀಶ ಮಾಂಬಾಡಿ ಸಂಪರ್ಕ ಸಂಖ್ಯೆ: 9448548127

MLA OFFICE HELPLINE:

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.