ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಬಂಟ್ವಾಳ ಪ್ರವಾಹ ಸ್ಥಿತಿ ಅವಲೋಕಿಸಲು ಆಗಮಿಸಿ, ನರಿಕೊಂಬು ಗ್ರಾಮದಲ್ಲಿ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಜಿಪಂ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರರು ಇದ್ದರು.