ಮಳೆ ತೀವ್ರತೆ ಕಡಿಮೆಯಾಗಿರುವುದರಿಂದ ಸಂಚಾರ ತಡೆಯಾಗಿದ್ದ ರಸ್ತೆಗಳಲ್ಲಿರುವ ಕಲ್ಲು, ಮಣ್ಣು, ಮರ ಮಟ್ಟುಗಳನ್ನು ಆದ್ಯತೆಯಲ್ಲಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೆದ್ದಾರಿ,ಮುಖ್ಯ ರಸ್ತೆ ಹಾಗೂ ಗ್ರಾಮಾಂತರ ರಸ್ತೆಗಳಲ್ಲಿ ಈಗಾಗಲೇ ನಿಂತಿರುವ ನೀರು ಇಳಿಮುಖವಾಗಿದೆ. ವಾಹನ ಸಂಚಾರ ಸುಗಮಗೊಳಿಸಲು ತ್ಯಾಜ್ಯ ತೆರವುಗೊಳಿಸಲು ಅಗತ್ಯ ಕಾರ್ಮಿಕರು ಮತ್ತು ಜೆಸಿಬಿಗಳನ್ನು ಬಳಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಹಾನಿಗೊಂಡಿರುವ ಮನೆಗಳಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡಲು ಜಿಲ್ಲಾಧಿಕಾರಿ ಗಳು ಸೂಚಿಸಿದ್ದಾರೆ.
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
Be the first to comment on "ರಸ್ತೆ ತ್ಯಾಜ್ಯ ಸ್ವಚ್ಛ – ಜಿಲ್ಲಾಧಿಕಾರಿ ಸೂಚನೆ"