ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ

ಬಿಜೆಪಿ ಎಸ್ಸಿ ಮೋರ್ಚಾ  ಜಿಲ್ಲಾ ಕಾರ್ಯಕಾರಿಣಿ ಸಭೆ ಮತ್ತು ಸದಸ್ಯತ್ವ ಅಭಿಯಾನ ಸಭೆ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಅಧ್ಯಕ್ಷತೆಯಲ್ಲಿ ಮಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ರಾಜ್ಯಾಧ್ಯಕ್ಷರ ಮಾರ್ಗದರ್ಶನದಂತೆ ಪ್ರತಿಯೊಂದು ಎಸ್ಸಿ ಮೋರ್ಚಾದ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಹಾಗೂ ಪಕ್ಷದ ಜವಾಬ್ದಾರಿಯುತ ಪದಾಧಿಕಾರಿಗಳು ಜಿಲ್ಲೆಯ ಪ್ರತಿಯೊಂದು ಪರಿಶಿಷ್ಟ ಜಾತಿಯ ಕಾಲೊನಿಗಳನ್ನು ಭೇಟಿ ಮಾಡಿ ಅವರಿಗೆ ಕೇಂದ್ರ ಸರಕಾರದ ಸಾಧನೆ ತಿಳಿಸಬೇಕು. ಪ್ರತಿ ಮನೆಗೆ ಭೇಟಿ ಕೊಟ್ಟು ಅವರನ್ನು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಪರಿಶಿಷ್ಟ ಜಾತಿಯ ಬಂಧುಗಳು ಭಾರತೀಯ ಜನತಾ ಪಾರ್ಟಿಯ ಸದಸ್ಯರಾಗುವಲ್ಲಿ ಪದಾಧಿಕಾರಿಗಳು ಶ್ರಮವಹಿಸಬೇಕು. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಸೆಯನ್ನು ಕಳೆದ ಅರುವತ್ತು ಏಳು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಯುಪಿಎ ಸರಕಾರ ಮಾಡದ ಕೆಲಸವನ್ನು ಕಳೆದ ಆರು ವರ್ಷಗಳಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿದೆ. ಡಾ. ಅಂಬೇಡ್ಕರ್ ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವ ಕೆಲಸ ಕಾರ್ಯಗಳು ಆಗಿವೆ. ಅಂಬೇಡ್ಕರ್ ಅವರ ಐದು ಪುಣ್ಯಕ್ಷೇತ್ರಗಳನ್ನು ಪಂಚತೀರ್ಥ ಪುಣ್ಯಕ್ಷೇತ್ರ ಮಾಡುವ ಮೂಲಕ,  ಜೈ ಭೀಮ್ ಆ್ಯಪ್ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಕೆಲಸ ಕಾರ್ಯಗಳು ತರಬೇತಿಗಳ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟಿದ್ದಾರೆ ಎಂದು ಅಭಿನಂದಿಸಿದರು.

ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿನಯ ನೇತ್ರ  ಹಾಗೂ ಶೀನಾ ಮಾಸ್ತಿಕಟ್ಟೆ ಕೋಶಾಧಿಕಾರಿ ಡಿಎಸ್ ಪ್ರಸನ್ನ ರಾಜ್ಯ ಕಾರ್ಯದರ್ಶಿ ಬಿಎಸ್ ವಸಂತ್  ಕುಮಾರ್ ಹಾಗೂ ಜಿಲ್ಲೆಯ ಮಂಡಲಗಳ ಅಧ್ಯಕ್ಷರುಗಳಾದ ಉಮಾನಾಥ ಅಮೀನ್, ಉಮೇಶ್ ಕೋಟ್ಯಾನ್, ವಿಠಲ ಮೂಡುಬಿದಿರೆ, ಬಾಲಪ್ಪ ಸುಳ್ಯ, ಗಂಗಾಧರ್ ಕೋಟ್ಯಾನ್, ಬಂಟ್ವಾಳ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಿಳಾ ಕಾರ್ಯದರ್ಶಿಯಾದ ವನಿತಾ ಸೋಮನಾಥ್ ಅವರು ಹಾಗೂ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*