ಶಿಕ್ಷಕ, ನಿರೂಪಕರಾಗಿ ರಾಮಚಂದ್ರರಾವ್ ಸೇವೆ ಅನನ್ಯ

ನಿವೃತ್ತ ಶಿಕ್ಷಕ ಬಿ. ರಾಮಚಂದ್ರ ರಾವ್ ಅವರಿಗೆ ಗೌರವಾಭಿನಂದನೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಶಿಕ್ಷಕ ರಾಜೇಂಂದ್ರ ಭಟ್ ಕೆ., ಅಭಿನಂದನಾ ಭಾಷಣ ಮಾಡಿ ಒಳ್ಳೆಯ ಶಿಕ್ಷಕರು ಯಾವತ್ತೂ ನಿವೃತ್ತಿಯಾಗುವುದಿಲ್ಲ, ಶಿಕ್ಷಣ ಇಲಾಖೆಗೆ ರಾಮಚಂದ್ರ ರಾವ್ ಅವರ ಸೇವೆ ಇನ್ನು ಮುಂದೆಯೂ ಸಿಗಬೇಕು  ಸಮಾಜದ ಆಸ್ತಿಯಾಗಿ ಗುರುತಿಸಿಕೊಂಡ ರಾಮಚಂದ್ರ ರಾವ್ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡವರು, ನಂ.1 ಕಾರ್ಯಕ್ರಮ ನಿರೂಪಕನಾಗಿ ಅವರು ಗೆದ್ದಿದ್ದಾರೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ರಾಮಚಂದ್ರ ರಾವ್ ಅವರು ಅಧ್ಯಾಪಕ ವೃತ್ತಿ ನನನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡಿ, ಮಾರ್ಗದರ್ಶನ ಮಾಡಿದೆ. ಜೇಸಿ ಸಂಸ್ಥೆಯ ಮೂಲಕ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದ್ದು ಜೇಸಿ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು.

ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ಡಾ. ಬಿ.ರಮೇಶಾನಂದ ಸೋಮಯಾಜಿ, ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ. ಹರ್ಷಾ ಸಂಪಿಗೆತ್ತಾಯ, ಲಯನ್ಸ್ ಜಿಲ್ಲಾ ಉಪರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ, ನಿರ್ಮಲ ಹೃದಯ ಲಯನ್ಸ್ ವಿಶೇಷ ಚೇತನ ಮಕ್ಕಳ ಪಾಲನ ಕೇಂದ್ರದ ಸಂಚಾಲಕ ದಾಮೋದರ ಬಿ.ಎಂ. ಜೇಸಿಐ ಬಂಟ್ವಾಳದ ಅಧ್ಯಕ್ಷ ಯತೀಶ್ ಕರ್ಕೆರಾ, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ಹರ್ಷರಾಜ್, ಲಯನಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಜೇಸಿಐ ಮಡಂತ್ಯಾರ್ ಅಧ್ಯಕ್ಷ ಅರುಣ್ ಮೊರಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಸ್ವಾಗತಿಸಿ, ಪ್ರಸ್ತಾಪಿಸಿದರು. ನಿರ್ದೇಶಕರಾದ ಕೇಶವ ಮಾಸ್ತರ್ ವಂದಿಸಿದರು. ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

ರಾರಸಂ ಫೌಂಡೇಶನ್, ಲಯನ್ಸ್ ಕ್ಲಬ್ ಬಂಟ್ವಾಳ, ಜೇಸಿಐ ಬಂಟ್ವಾಳ, ಜೇಸಿಐ ಮಡಂತ್ಯಾರ್, ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಕಾರ್ಯಕ್ರಮ ನಡೆದಿತ್ತು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಶಿಕ್ಷಕ, ನಿರೂಪಕರಾಗಿ ರಾಮಚಂದ್ರರಾವ್ ಸೇವೆ ಅನನ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*