ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಆಹಾರ ಮೇಳ, ಕೊಠಡಿ, ರಂಗಮಂದಿರಕ್ಕೆ ಶಿಲಾನ್ಯಾಸ

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೀಗ ಊರ ದಾನಿಗಳು, ವಿದ್ಯಾಭಿಮಾನಿಗಳ ಸಹಕಾರದಿಂದ ಅಭಿವೃದ್ಧಿ ಹೊಂದುತ್ತಿದೆ. ಶತಮಾನೋತ್ತರ ಬೆಳ್ಳಿಹಬ್ಬ ನಿಮಿತ್ತ ಮೂರು ಪ್ರತ್ಯೇಕ ಕೊಠಡಿಗಳು ನಿರ್ಮಾಣವಾಗಿವೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೊಠಡಿಗಳನ್ನು ವಿಧಾನಪರಿಷತ್ತು ಸದಸ್ಯ ಐವನ್ ಡಿಸೋಜ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉದ್ಘಾಟಿಸಿದರೆ, ಶತಮಾನೋತ್ತರ ಬೆಳ್ಳಿಹಬ್ಬ ಪ್ರಯುಕ್ತ ನಿರ್ಮಾಣಗೊಳ್ಳುತ್ತಿರುವ 10 ಕೊಠಡಿಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಶಿಲೆ ಹಸ್ತಾಂತರಿಸಿದರು.

ಜಾಹೀರಾತು

ಒಟ್ಟು 3 ಕೋಟಿ ರೂ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು , ಎಂಆರ್ ಪಿಎಲ್ ನಿಂದ 64 ಲಕ್ಷ ರೂ ನೆರವು ಮಂಜೂರುಗೊಂಡಿದೆ ಎಂದು ಈ ಸಂದರ್ಭ ನಳಿನ್ ಹೇಳಿದರು.

ಜಾಹೀರಾತು

ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಂತಿ ಮತ್ತು ಸೌಹಾರ್ದತೆ ಕಾಯ್ದುಕೊಂಡ ದೇಶಗಳು ಮಾತ್ರ ಅಭಿವೃದ್ಧಿಪಥದಲ್ಲಿ ಮುನ್ನಡೆಯಲು ಸಾಧ್ಯ ಎಂದರು.

ಇದೇ ವೇಳೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ನೂತನ ಸೋಲಾರ್ ಘಟಕ ಅಳವಡಿಸಲು 3 ಲಕ್ಷ ರೂ ಅನುದಾನ, ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ  1 ಲಕ್ಷ ರೂ ಅನುದಾನ, ತಾ.ಪಂ.ಸದಸ್ಯ ಮಹಾಬಲ ಆಳ್ವ 50 ಸಾವಿರ ರೂ ಅನುದಾನ ನೀಡುವುದಾಗಿ ಘೋಷಿಸಿದರು.

ಜಾಹೀರಾತು

ದಾನಿ ಪಿ.ಬಿ.ಇಬ್ರಾಹಿಂ (ಅವರು ಹಿರಿಯ ವಿದ್ಯಾರ್ಥಿಯೂ ಹೌದು) ನೀಡಿದ ರೂ 5 ಲಕ್ಷ ವೆಚ್ಚದ ರಂಗಮಂದಿರ ನಿರ್ಮಾಣ ಕಾಮಗಾರಿಗೆಶಿಕ್ಷಣಪ್ರೇಮಿ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಶಿಲಾನ್ಯಾಸ ನೆರವೇರಿಸಿದರು.

ಆಷಾಢ ಮಾಸದ ವೈವಿಧ್ಯಮಯ ತಿಂಡಿ ತಿನಿಸುಗಳ ಆಹಾರ ಮೇಳವನ್ನು ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಉದ್ಘಾಟಿಸಿದರು. ನೂತನ ಕಟ್ಟಡ ಕಾಮಗಾರಿಗೆ ರೂ 4 ಲಕ್ಷ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ ಸ್ಥಳೀಯ ಯುವಕರು ನೂತನ ಕಟ್ಟಡ ನಿರ್ಮಾಣಕ್ಕೆ ರೂ 1ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿ ಗಮನ ಸೆಳೆದರು.

ಜಾಹೀರಾತು

ಸುಮಾರು 70 ಬಗೆಯ ಆಷಾಢ ಮಾಸದ ವೈವಿಧ್ಯಮಯ ತಿಂಡಿ ತಿನಿಸುಗಳು ಜನಾಕರ್ಷಣೆ ಪಡೆಯಿತು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಹಿರಿಯ ಹಳೆ ವಿದ್ಯಾರ್ಥಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಉದ್ಯಮಿ ಜಿ.ಯೂಸುಫ್ ಗೋಳ್ತಮಜಲು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಅಬೂಬಕ್ಕರ್ ಆಶ್ರಫ್ ಸ್ವಾಗತಿಸಿ, ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ ಕೆ. ಪ್ರಾಸ್ತಾವಿಕ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ರಾಜೇಶ ಕೊಟ್ಟಾರಿ ವಂದಿಸಿದರು. ಕಲಾವಿದ ರಮೇಶ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಆಹಾರ ಮೇಳ, ಕೊಠಡಿ, ರಂಗಮಂದಿರಕ್ಕೆ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*