ದ.ಕ.ಜಿಪಂ ಹಿ.ಪ್ರಾ.ಶಾಲೆ ಪೆರಾಬೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭ ಪೆರಾಬೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭ ಬಿಜೆಪಿ ಯುವಮೋರ್ಚಾ ರಾಮನಗರ ಜಿಲ್ಲಾಧ್ಯಕ್ಷ ವರದರಾಜ ಗೌಡ ಕೊಡುಗೆಯಾಗಿ ನೀಡಿದ ಸಮವಸ್ತ್ರವನ್ನು ವಿತರಿಸಲಾಯಿತು.
ನಿವೃತ್ತ ವಾಯುಸೇನಾ ದಂಡಾಧಿಕಾರಿ ಕೆ.ಬಿ.ಶೆಟ್ಟಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ರಾಮನಗರ ಜಿಲ್ಲಾ ಬಿಜೆಪಿ ಯುವಮೋರ್ಚ ಅಧ್ಯಕ್ಷ ವರದರಾಜ ಗೌಡ ಅದೃಷ್ಟ ಚೀಟಿ ಕರಪತ್ರ ಬಿಡುಗಡೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ 32 ಸಾವಿರ ರೂ ಮೌಲ್ಯದ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಿದರು.
ಈ ಸಂದರ್ಭ ಸಿಎ ಬ್ಯಾಂಕ್ ಸಿಇಒ ಪ್ರಶಾಂತ್ ರೈ ಶರವೂರು ದೇವಸ್ಥಾನದ ಮೊಕ್ತೇಸರ ಕಮಲಾಕ್ಷ ರೈ, ಎಸ್.ಡಿ.ಎಂ.ಸಿ. ಅಧ್ಯಕ್ಷ ಗಂಗಾಧರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ರೈ, ನಿವೃತ್ತ ಮುಖ್ಯ ಶಿಕ್ಷಕ ನಾಗಪ್ಪ ಗೌಡ, ಗ್ರಾಪಂ ಉಪಾಧ್ಯಕ್ಷ ಜನಾರ್ದನ ಶೆಟ್ಟಿ, ಮುಖ್ಯ ಶಿಕ್ಷಕಿ ಹೇಮಲತಾ ಪ್ರದೀಪ್ ಮತ್ತಿತರರು ಇದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…