ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳಪದವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಲ್ಲಿ 13 ವರ್ಷಗಳ ಕಾಲ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಫ್ಲೋರಿನ್ ಹಿಲ್ಡಾ ಕರ್ವಾಲ್ಲೊ ಅವರಿಗೆ ಬೀಳ್ಕೊಡುಗೆ ಮತ್ತು ಸಮ್ಮಾನ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಅರಳ ಗ್ರಾ.ಪಂ. ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಜಗದೀಶ್ ಆಳ್ವ ಅಗ್ಗೊಂಡೆ, ಸದಸ್ಯರಾದ ಅಶ್ರಫ್ , ಕಲ್ಯಾಣಿ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕುಮಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಮಹಾಸ್ವಾಮಿ ಸ್ವಾಗತಿಸಿದರು., ಸಹ ಶಿಕ್ಷಕಿ ಶಾಂತಿ ವಂದಿಸಿದರು. ಸಹ ಶಿಕ್ಷಕಿ ಶಾಲಿನಿ ಡಿಸೋಜ ಕಾರ್ಯಕ್ರಮ ನಿರೂಪಣೆ ಮಾಡಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…