ಬಂಟ್ವಾಳ

ಸಿಎಂ ಸೂಚನೆಯಂತೆ ಪರಿಹಾರದ ಮೊತ್ತ ಹೆಚ್ಚಳ: ರಾಜೇಶ್ ನಾಯ್ಕ್

  • ಬಂಟ್ವಾಳದಲ್ಲಿ ತಲಾ 10 ಸಾವಿರ ರೂ ಚೆಕ್ ವಿತರಣೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಸಂತ್ರಸ್ತರಿಗೆ 10 ಸಾವಿರ ರೂ ಚೆಕ್ ವಿತರಿಸಲಾಗುತ್ತದೆ. ಜೊತೆಗೆ ಸಂಪೂರ್ಣ ಮನೆಯನ್ನು ಕಳೆದುಕೊಂಡವರಿಗೆ 5 ಲಕ್ಷ ರೂ ವಿತರಿಸಲು ಸಿಎಂ ಸೂಚಿಸಿದ್ದಾರೆ ಎಂದು ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಬಿ.ಮೂಡ, ಪಾಣೆಮಂಗಳೂರು, ಬಿ.ಕಸಬ, ಸಜಿಪಮೂಡ ಮತ್ತು ಸಜಿಪಮುನ್ನೂರು ಗ್ರಾಮಗಳ ನೆರೆ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯಕ್ರಮ ಸೋಮವಾರ ಬಿ.ಸಿ.ರೋಡಿನ ರೋಟರಿ ಕ್ಲಬ್‌ನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆರೆ ಪೀಡಿತ ಜಿಲ್ಲೆಗಳಿಗೆ ಸಂಚರಿಸಿ ಸಮೀಕ್ಷೆ ನಡೆಸಿ ಪರಿಹಾರದ ಮೊತ್ತವನ್ನು ವಿತರಿಸುವ ಕಾರ್ಯ ಮಾಡಿದ್ದಾರೆ. ಇಷ್ಟು ತ್ವರಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಿರುವುದು ಇದೇ ಮೊದಲು. ಮುಖ್ಯಮಂತ್ರಿ ಅವರು ತಮ್ಮ ಮನವಿಗೆ ಸ್ಪಂದಿಸಿ ಈ ಮೊದಲಿದ್ದ ಪರಿಹಾರದ ಮೊತ್ತವನ್ನು 10ಸಾವಿರ ರೂ.ಗೆ ಹಾಗೂ ತೀವ್ರ ಹಾನಿಯ 95 ಸಾವಿರ ರೂ.ದಿಂದ 5 ಲಕ್ಷ ರೂ.ವರೆಗೂ ಹೆಚ್ಚಿಸಿ ಪರಿಹಾರ ಕಾರ್ಯಕ್ಕೆ ಮುಂದಾಗಿದೆ. ಇಲ್ಲಿಯೂ ಕೂಡಾ 10 ಸಾವಿರ ರೂ. ಪರಿಹಾರದ ಚೆಕ್ ಅನ್ನು ನೀಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮಣಿನಾಲ್ಕೂರು, ನಾವೂರು ಗ್ರಾಮದ 57 ಮಂದಿ, ಅಮ್ಟಾಡಿ ಗ್ರಾಮದ 20 ಮಂದಿ ಹಾಗೂ ಬಂಟ್ವಾಳ ತಾಲೂಕಿನ ಬಿ.ಮೂಡ, ಪಾಣೆಮಂಗಳೂರು, ಬಿ.ಕಸಬ, ಸಜಿಪಮೂಡ ಮತ್ತು ಸಜಿಪಮುನ್ನೂರು ಗ್ರಾಮಗಳ 443 ಸಂತ್ರಸ್ತರಿಗೆ ಸಹಿತ ಸುಮಾರು 500ಕ್ಕೂ ಹೆಚ್ಚಿನ ನೆರೆ ಸಂತ್ರಸ್ತರಿಗೆ ಒಟ್ಟು 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್., ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಮುನೀಶ್ ಅಲಿ, ಸಿದ್ದೀಕ್ ಗುಡ್ಡೆಯಂಗಡಿ, ಮುಹಮ್ಮದ್ ನಂದರಬೆಟ್ಟು, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ರಾಮ ಕಾಟಿಪಳ್ಳ, ಸಿಬ್ಬಂದಿಗಳಾದ ಶಿವಾನಂದ, ಸದಾಶಿವ ಕೈಕಂಬ ಹಾಜರಿದ್ದರು.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts