ಪತ್ತುಮುಡಿಯಲ್ಲಿ ಕರಾವಳಿ ಚಿತ್ರಕಲಾ ಚಾವಡಿಯ ಸದಸ್ಯರಿಂದ ಕಲಾಶಿಬಿರ

ಮಂಗಳೂರಿನ ಕರಾವಳಿ ಚಿತ್ರಕಲಾ ಚಾವಡಿ, ಪತ್ತುಮುಡಿ ಮನೆತನದ ಸಹಯೋಗದೊಂದಿಗೆ ತುಳುನಾಡಿನ ಸಾಂಪ್ರದಾಯಿಕ ಗುತ್ತುಮನೆಗಳ ಮಹತ್ವ ಸಾರುವ ಕಲಾಶಿಬಿರ ಭಾನುವಾರ ನಡೆಯಿತು.

ಜಾಹೀರಾತು

ಚಿತ್ರ ಬರೆದು ಉದ್ಘಾಟಿಸಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಮಾತನಾಡಿ, ವರ್ತಮಾನಕ್ಕೆ ಇತಿಹಾಸವನ್ನು ಸಾರುವ ನೈಪುಣ್ಯ ಚಿತ್ರಕಲಾವಿದನಿಗಿರುತ್ತದೆ. ಅಕ್ಷರಜ್ಞಾನ ಮನುಷ್ಯನಿಗೆ ಬರುವ ಸಾವಿರಾರು ವರ್ಷಗಳ ಮೊದಲೇ ಮನುಷ್ಯ ತನ್ನ ಭಾವನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಪಡಿಸುತ್ತಿದ್ದ ಎಂದರು. ಭಾರತೀಯರು ಇತಿಹಾಸಪ್ರಜ್ಞೆ ಬೆಳೆಸಿಕೊಳ್ಳಬೇಕಾಗಿದೆ, ಇದನ್ನು ಕಟ್ಟಿಕೊಡುವ ಕಲಾವಿದರ ಪ್ರಯತ್ನ ಅಭಿನಂದನೀಯ ಎಂದು ಶುಭ ಹಾರೈಸಿದರು.

ಪತ್ತುಮುಡಿ ಮನೆಯವರಾದ ಅನಂತಯ್ಯ ರಾವ್, ಜಗದೀಶ ರಾವ್, ಶರತ್ ರಾವ್, ಶಿಲ್ಪಾ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಆರ್ಟ್ ಗ್ಯಾಲರಿಯ ಕೋಟಿಪ್ರಸಾದ್ ಆಳ್ವ ಉಪಸ್ಥಿತರಿದ್ದರು. ಕಲಾವಿದ ನಿವೃತ್ತ ಪ್ರಾಧ್ಯಾಪಕ ಪ್ರೊ. ಅನಂತಪದ್ಮನಾಭ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಲಾವಿದ ದಿನೇಶ್ ಹೊಳ್ಳ ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಕಲಾವಿದರಾದ ಕೋಟಿಪ್ರಸಾದ್ ಆಳ್ವ, ಗಣೇಶ ಸೋಮಯಾಜಿ, ಶರತ್ ಹೊಳ್ಳ, ಅನಂತಪದ್ಮನಾಭ ರಾವ್, ಕಮಾಲ್, ಭಾಗೀರಥಿ ಭಂಡಾರ್ಕಾರ್, ಮನೋರಂಜಿನಿ, ದಿನೇಶ್ ಹೊಳ್ಳ, ಖುರ್ಷೀದ್ ಯಾಕೂಬ್, ಸಪ್ನಾ ನೊರೊನ್ಹಾ, ವೀಣಾ ಮಧುಸೂಧನ, ಸುಧೀರ್ ಕುಮಾರ್ ಜಿ, ಮುರಳೀಧರ ಆಚಾರ್, ಬಾಲಕೃಷ್ಣ ಶೆಟ್ಟಿ, ಪೂರ್ಣೇಶ್, ಜಯಶ್ರೀ ಶರ್ಮ, ತಾರಾನಾಥ ಕೈರಂಗಳ, ಈರಣ್ಣ ತಿಪ್ಪಣ್ಣವರ್, ನವೀನ್ ಬಂಗೇರ, ಜ್ಯೋತಿ ಶಿಬಿರದಲ್ಲಿ ಭಾಗವಹಿಸಿದ್ದರು.

www.bantwalnews.com Editor: Harish Mambady

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪತ್ತುಮುಡಿಯಲ್ಲಿ ಕರಾವಳಿ ಚಿತ್ರಕಲಾ ಚಾವಡಿಯ ಸದಸ್ಯರಿಂದ ಕಲಾಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*