ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 12.20 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗವಹಿಸುವರು. ಅಂದು ನಗರದಲ್ಲಿ ವಾಸ್ತವ್ಯ ಹೂಡಿ, ಆ.31 ರಂದು ಬೆಳಿಗ್ಗೆ 7 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಪೂರ್ವಸಿದ್ಧತಾ ಸಭೆ: ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)