ದೆಹಲಿಯ ಗುರುಗ್ರಾಮದಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರೀಯ ಸ್ಪೀಡ್ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್-2019 ನಲ್ಲಿ ಮಂಗಳೂರಿನ ಅನಘಾ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಾಹೀರಾತು
2019ರ ಆಗಸ್ಟ್ 8 ಹಾಗೂ 9 ರಂದು ನಡೆದ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನ 500 ಮೀಟರ್ ಐಸ್ ರಿಂಕ್ ರೇಸ್ ನ 10 ವರ್ಷದೊಳಗಿನ ವಿಭಾಗದಲ್ಲಿ ಅನಘಾ ಬೆಳ್ಳಿ ಪದಕ ಪಡೆದಿದ್ದಾರೆ. ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 4 ನೇ ತರಗತಿಯ ವಿದ್ಯಾರ್ಥಿನಿ.
ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ರಾಷ್ಟ್ರೀಯ ಐಸ್ ಸ್ಕೇಟಿಂಗ್ ತರಬೇತುದಾರ ಅವಧೂತ್ ಥಾವಡೆ ಅವರಿಂದ ಅನಘಾ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಐಸ್ ಸ್ಕೇಟಿಂಗ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಂಗಳೂರಿನ ಅನಘಾ"
Be the first to comment on "ಐಸ್ ಸ್ಕೇಟಿಂಗ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಂಗಳೂರಿನ ಅನಘಾ"