ಬಂಟ್ವಾಳ: ಸಿಬಿಐ ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಖ್ಯಾತ ನ್ಯಾಯವಾದಿಯೂ ಆಗಿರುವ ಚಿದಂಬರಂ ಬಂಧನ ಪ್ರಕರಣದಲ್ಲಿ ಇದು ಕಂಡುಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನೋಟರಿ ಎಂ. ಚಂದ್ರಶೇಖರ ಪೂಜಾರಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರುವಲ್ಲಿ ಬಿಜೆಪಿ, ಸಿಬಿಐ ಮತ್ತು ಕೇಂದ್ರ ಮುಖ್ಯ ಪಾತ್ರ ವಹಿಸುತ್ತಿರುವುದಾಗಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ನೀಡದೆ ಜಿಲ್ಲೆಯ ಜನತೆಗೆ ದ್ರೋಹ ಮಾಡಿದ್ದಾಗಿ ಚಂದ್ರಶೇಖರ ಪೂಜಾರಿ ಆಪಾದಿಸಿದ್ದಾರೆ.ಕೇವಲ ಜಾತಿ ಸಮೀಪಕರಣಕ್ಕೆ ಜೋತುಬಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸಿಗಬೇಕಾದ ಪ್ರಮಾಣದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಕೊಟ್ಟಿಲ್ಲ. ಇದರಿಂದ ಉಡುಪಿ, ದ.ಕ. ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಹೊಡೆತ ಬೀಳಲಿದೆ ಎಂದವರು ತಿಳಿಸಿದ್ದಾರೆ.
Be the first to comment on "ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಬಿಜೆಪಿ ಯತ್ನ: ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ"