ಬಂಟ್ವಾಳ

ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಬಿಜೆಪಿ ಯತ್ನ: ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ

ಬಂಟ್ವಾಳ: ಸಿಬಿಐ ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಖ್ಯಾತ ನ್ಯಾಯವಾದಿಯೂ ಆಗಿರುವ ಚಿದಂಬರಂ ಬಂಧನ ಪ್ರಕರಣದಲ್ಲಿ ಇದು ಕಂಡುಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನೋಟರಿ ಎಂ. ಚಂದ್ರಶೇಖರ ಪೂಜಾರಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರುವಲ್ಲಿ ಬಿಜೆಪಿ, ಸಿಬಿಐ ಮತ್ತು ಕೇಂದ್ರ ಮುಖ್ಯ ಪಾತ್ರ ವಹಿಸುತ್ತಿರುವುದಾಗಿ ಆರೋಪಿಸಿದ್ದಾರೆ.

ಜಾಹೀರಾತು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ನೀಡದೆ ಜಿಲ್ಲೆಯ ಜನತೆಗೆ ದ್ರೋಹ ಮಾಡಿದ್ದಾಗಿ ಚಂದ್ರಶೇಖರ ಪೂಜಾರಿ ಆಪಾದಿಸಿದ್ದಾರೆ.ಕೇವಲ ಜಾತಿ ಸಮೀಪಕರಣಕ್ಕೆ ಜೋತುಬಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸಿಗಬೇಕಾದ ಪ್ರಮಾಣದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಕೊಟ್ಟಿಲ್ಲ. ಇದರಿಂದ ಉಡುಪಿ, ದ.ಕ. ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಹೊಡೆತ ಬೀಳಲಿದೆ ಎಂದವರು ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts